ದಾವಣಗೆರೆ: 2023-24 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳಾದ ಧನಶ್ರೀ, ಚೇತನಾ, ಉದ್ಯೋಗಿನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಆನಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮಓನ್, ಬೆಂಗಳೂರು ಓನ್, ಕರ್ನಾಟಕ ಓನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಡಿಸೆಂಬರ್ 22 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಧಾರವಾಡ ಹಾಗೂ ಜಿಲ್ಲಾ ಅಭಿವೃದ್ಧಿ ನೀರಿಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಕಚೇರಿಯನ್ನು ಸಂಪರ್ಕಿಸಬಹುದು. ದೂ.ಸಂ:0836-247850 ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



