ಬೆಂಗಳೂರು: ಗ್ರಾಮ ಪಂಚಾಯತ್‌ಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪಂಚಮಿತ್ರ ವೆಬ್ ಸೈಟ್ ಹಾಗೂ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ದೇಶದಲ್ಲೇ ಪ್ರಪ್ರಥಮ ಬಾರಿಗೆ ಪಂಚಮಿತ್ರ ವಾಟ್ಸ್‌ಅಪ್ ಚಾಟ್ ಆರಂಭಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಂಚಮಿತ್ರ ಪೋರ್ಟಲ್‌ನ ಲಾಂಛನ ಅನಾವರಣಗೊಳಿಸಿ ಮಾತನಾಡಿ, ಗ್ರಾಪಂಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್‌ಸೈಟ್ ಮತ್ತು ಪೋರ್ಟಲ್‌ಗಳಿಗೆ ಭೇಟಿ ನೀಡಬೇಕಾಗಿತ್ತು. ಇದಕ್ಕಾಗಿ ನಿರ್ದಿಷ್ಟವಾದ ವೆಬ್‌ಸೈಟ್ ಅಥವಾ ಪೋರ್ಟಲ್‌ಗಳು ಇರಲಿಲ್ಲ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ವಾಟ್ಸ್‌ಆಪ್ ಚಾಟ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ.ಇನ್ಮುಂದೆ ಗ್ರಾಪಂಗಳ ಕುಂದುಕೊರತೆಗಳನ್ನು ವಾಟ್ಸ್‌ಅಪ್ ಚಾಟ್ ಸಂಖ್ಯೆ 8277506000 ಮೂಲಕ ದಾಖಲಿಸಬಹುದಾಗಿದೆ.
ಏನಿದು ಪಂಚಮಿತ್ರ? :ಪಂಚಮಿತ್ರ ಪೋರ್ಟಲ್ ನಲ್ಲಿ ಚುನಾಯಿತ ಪ್ರತಿನಿ ಧಿಗಳ ವಿವರ, ಸಿಬಂದಿ ವಿವರ, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿ, ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಸೇವೆಗಳ ವಿವರಗಳು, ಸ್ವ ಸಹಾಯ ಗುಂಪಿನ ವಿವರಗಳು, ಗ್ರಾ.ಪಂ.ಗಳ ಕಾರ್ಯಕ್ರಮಗಳು ಮತ್ತು ಉಪಕ್ರಮಗಳು, 4 (1) (ಎ) 4 (1) (ಬಿ) ಆರ್‌ಟಿಐ ದಾಖಲೆಗಳ ವಿವರಗಳನ್ನು ಪಡೆಯಬಹುದಾಗಿದೆ.
- ಯಾವ ಸೇವೆ ಲಭ್ಯ?
- ಗ್ರಾಪಂಗಳಿಗೆ ಸಂಬಂಧಿ ಸಿ ಕಟ್ಟಡ ನಿರ್ಮಾಣ ಪರವಾನಿಗೆ ಹೊಸ ನೀರು ಸರಬರಾಜು ಸಂಪರ್ಕ
- ನೀರು ಸರಬರಾಜು ಸಂಪರ್ಕದ ಕಡಿತ
- ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪದ ನಿರ್ವಹಣೆ
- ಗ್ರಾಮ ನೈರ್ಮಲ್ಯದ ನಿರ್ವಹಣೆ
- ವ್ಯಾಪಾರ ಪರವಾನಿಗೆ
- ಸ್ವಾಧಿಧೀನ ಪ್ರಮಾಣಪತ್ರ
- ರಸ್ತೆ, ಅಗೆಯಲು ಅನುಮತಿ
- ಕೈಗಾರಿಕೆ/ಕೃಷಿ ಆಧಾರಿತ ಉತ್ಪಾದನ ಘಟಕ ಸ್ಥಾಪನೆಗೆ ಅನುಮತಿ
- ನಿರಾಕ್ಷೇಪಣ ಪತ್ರ ಅಡಿಯಲ್ಲಿ ಕಾರ್ಮಿಕರಿಗೆ ಜಾಬ್‌ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು
- ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ
- ನಿಯಮಿತಗೊಳಿಸುವಿಕೆ ಓವರ್ ಗ್ರೌಂಡ್ ಕೇಬಲ್ ಮೂಲಸೌಕರ್ಯ, ಭೂಗತ ಕೇಬಲ್ ಮೂಲಸೌಕರ್ಯಕ್ಕಾಗಿ ಸೇವೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ