Connect with us

Dvgsuddi Kannada | online news portal | Kannada news online

ರಾಜ್ಯದ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಭರ್ತಿಗೆ ಅರ್ಥಿಕ ಇಲಾಖೆ ಅನುಮೋದನೆ

IMG 20240130 103659

ಪ್ರಮುಖ ಸುದ್ದಿ

ರಾಜ್ಯದ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಭರ್ತಿಗೆ ಅರ್ಥಿಕ ಇಲಾಖೆ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಿದ್ದು, ನೇಮಕಾತಿಗೆ ಅರ್ಥಿಕ ಇಲಾಖೆ ಅನುಮೋದನೆ ಕೊಟ್ಟಿದೆ. ಈ ಮೂಲಕ ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಖಾಲಿ ಇರುವ ಜಿಲ್ಲಾವಾರು ಹುದ್ದೆಗಳ ಮಾಹಿತಿ ಇಲ್ಲಿದೆ.

ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಖಾಲಿಯಿರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇರ ನೇಮಕಾತಿ ಮಾಡುವ ಸಂಬಂಧ ಆರ್ಥಿಕ ಇಲಾಖೆಯು 2023-24, 2024-25 ಹಾಗೂ 2025-26 ನೇ ಸಾಲಿನ ವಾರ್ಷಿಕವಾಗಿ 500 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿ ನೀಡಿತ್ತು. ಆದರೆ,‌ ಎಲ್ಲ ಜಿಲ್ಲೆಗಳಲ್ಲಿ ಮಂಜೂರಾದ ಹುದ್ದೆಗಳು, ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಗಳು ಹಾಗೂ ಖಾಲಿ ಹುದ್ದೆಗಳಿಗನುಗುಣವಾಗಿ ಪ್ರಸಕ್ತ ಖಾಲಿಯಿರುವ 1820 ಹುದ್ದೆಗಳ ಪೈಕಿ 1000 ಹುದ್ದೆಗಳನ್ನು ನೇರನೇಮಕಾತಿಯಡಿ ಭರ್ತಿಮಾಡಿಕೊಳ್ಳಲು ಉದ್ದೇಶಿಸಲಾಗಿರುತ್ತದೆ.

ಕಂದಾಯ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳು, ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಗಳು ಹಾಗೂ ಖಾಲಿ ಹುದ್ದೆಯ ಸಂಖ್ಯೆಗಳ (ನೇರ ನೇಮಕಾತಿ ಹಾಗೂ ಮುಂಬಡ್ತಿ ಹುದ್ದೆಗಳನ್ನು ಒಳಗೊಂಡಂತೆ) ಆಯಾ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಅನುಬಂಧ-1ರ ಕಲಂ (06) ರಲ್ಲಿ ನೀಡಿರುವಂತೆ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುತ್ತಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top