ಬೆಂಗಳೂರು: ಮನೆ ಒಡತಿಗೆ 2 ಸಾವಿರ ಹಣ ನೀಡುವ ಗೃಹ ಲಕ್ಷ್ಮೀ ಯೋಜನೆಯನ್ನು ಆ. 20ರಂದು ರಾಜೀವ್ ಗಾಂಧಿ ಅವರ ಜನ್ಮ ದಿನದಂದು ಚಾಲನೆ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪ್ರತಿಯೊಂದು ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯಿತಿ,ಮಹಾನಗರ ಪಾಲಿಕೆಯ ವಾರ್ಡ್ ಮಟ್ಟದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳನ್ನು ಸೇರಿಸಿ ಪಕ್ಷಾತೀತವಾಗಿ ಸಂಭ್ರಮಾಚರಣೆ ಮಾಡುವಂತೆ ಸೂಚಿಸಿದ್ಧೇವೆ.1 ಕೋಟಿ 28 ಲಕ್ಷ ಮಹಿಳೆಯರ ಅರ್ಜಿಯನ್ನು ಪರಿಗಣಿಸಿದ್ದೇವೆ. ಅವರ ಖಾತೆಗೆ 2000 ಜಮಾ ಆಗಲಿದೆ ಎಂದು ತಿಳಿಸಿದರು.



