ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ‌ ಹಣ ಮಹಿಳೆಯರ ಖಾತೆಗೆ ಜಮಾ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಳಗಾವಿ: ರಾಜ್ಯದ ಯಜಮಾನಿ ಮಹಿಳೆಯರಿಗೆ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಹಣವನ್ನು ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಭರವಸೆ ನೀಡಿದ್ದು, ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದ್ದಾರೆ ಎಂದರು.

ಮುಂದಿನ ತಿಂಗಳು 20ಕ್ಕೆ ನಮ್ಮ ಸರ್ಕಾರ ಅಧಿಕಾರ ಬಂದು 2 ವರ್ಷ ಪೂರೈಸುತ್ತಿದೆ. ಈವರೆಗೆ 80 ಸಾವಿರ ಕೋಟಿ ರೂಪಾಯಿಗಳಷ್ಟು ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರ ಜೇಬಿಗೆ ಹಾಕಿದ್ದೇವೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ ಸಾಮಾನ್ಯರ ಮೇಲಿರುವ ಬದ್ಧತೆ ಎಂದು ಹೇಳಿದರು.

2023 ರಲ್ಲಿ ಜನರ ವಿಶ್ವಾಸ ಗಳಿಸಿ ಕರ್ನಾಟದಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರದಲ್ಲಿದ್ದೇವೆ. ಸರ್ಕಾರ ಬಂದು 100 ದಿನಗಳ ಒಳಗೆ ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನು ಮನೆ ಬಾಗಿಲಿಗೆ ತಂದಿದ್ದೇವೆ. 136 ಸ್ಥಾನ ಗೆದ್ದರೂ ರಾಜ್ಯ ಸರ್ಕಾರ ಉಳಿಯುವುದಿಲ್ಲ, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಬರಲು ಸಾಧ್ಯವಿಲ್ಲ ಎಂದು ಬಿಜೆಪಿಗರು ಹೇಳುತ್ತಿದ್ದರು. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ಇತಿಹಾಸದಲ್ಲೇ ಎಂದೂ ಕಾಣದಂತಹ ಹಲವಾರು ಯೋಜನೆಗಳ ಮೂಲಕ ನಮ್ಮ ಸರಕಾರ ಜನರ ಪ್ರೀತಿ, ವಿಶ್ವಾಸ ಗಳಿಸಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ ಸುಮಾರು 4-5 ಸಾವಿರ ರೂಪಾಯಿ ಲಾಭ ಮಾಡಿಕೊಡಲಾಗುತ್ತಿದೆ. ಈ ಮೂಲಕ ಕುಟುಂಬಗಳ ಆರ್ಥಿಕ ಶಕ್ತಿಯನ್ನು, ಖರೀದಿ ಸಾಮರ್ಥ್ಯವನ್ನು ಹೆಚ್ಚಿಸಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಪೆಟ್ರೋಲ್ ಬೆಲೆ 63.77 ರೂಪಾಯಿ ಇತ್ತು, ಇಂದು 102 ರೂಪಾಯಿ ಆಗಿದೆ. ಗ್ಯಾಸ್ ಸಿಲೆಂಡರ್ ದರ 410 ರೂಪಾಯಿ ಇತ್ತು, ಈಗ 855.50 ರೂಪಾಯಿ ಆಗಿದೆ. ಸಿಮೆಂಟ್, ರಸ ಗೊಬ್ಬರದ ಬೆಲೆ ದುಬಾರಿಯಾದೆ. ಇದು ಕೇಂದ್ರ ಸರ್ಕಾರದ ಜನರಿಗೆ ಕೊಟ್ಟಿರುವ ಕೊಡುಗೆ ಎಂದು ಕಿಡಿಕಾರಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *