ದಾವಣಗೆರೆ: ಬೆಂಗಳೂರು ಹೆಚ್.ಎ.ಎಲ್ ವತಿಯಿಂದ ಒಂದು ವರ್ಷದ ಡಿಪ್ಲೋಮಾ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ತರಬೇತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಅಭ್ಯರ್ಥಿಗಳು www.mhrdnats.gov.in ಈ ವೆಬ್‍ಸೈಟ್‍ನಲ್ಲಿ ಮಾಹಿತಿಯನ್ನು ವೀಕ್ಷಿಸಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಡಿಸೆಂಬರ್ 15 ರಂದು ಬೆಳಿಗ್ಗೆ 8 ಗಂಟೆಗೆ ಟೆಕ್ನಿಕಲ್ ಟ್ರೈನಿಂಗ್ ಇನ್ಸಿಟ್ಯೂಟ್ , ಹಿಂದೂಸ್ತಾನ್ ಏರೋನಾಟಿಕ್ಸ್ .ಲಿ, ವಿಮಾನಪುರ ಅಂಚೆ, ಬೆಂಗಳೂರು-560017 ಈ ವಿಳಾಸದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ, ದಾವಣಗೆರೆ (ದೂ.ಸಂ:08192-259446) ಮೊಬೈಲ್ ಸಂಖ್ಯೆ:7406323294 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.



