ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ 6 ತಿಂಗಳು ಅವಧಿಗೆ ಭರ್ತಿಗೆ ಸರ್ಕಾರ ಈ ಹಿಂದೆ ಆದೇಶಿಸಿತ್ತು. ಇದೀಗ ಈ ಆದೇಶ ಅನ್ವಯ ಮತ್ತೆ ಆರು ತಿಂಗಳು ಎಲ್ಲಾ ಹುದ್ದೆ ಮುಂದುವರಿಸುಂತೆ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು,ಲ್ಯಾಬ್ ಟೆಕ್ನೀಶೀಯನ್, ಫಾರ್ಮಸಿಸ್ಟ್ ಮತ್ತು ಗ್ರೂಪ್ ಡಿ ವೃಂದದ ಎಲ್ಲಾ ಹುದ್ದೆಗಳನ್ನು 30:09:2021 ರವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರದ ಅಪಾರ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶ ಹೊರಡಿಸಿದ್ದಾರೆ.



