Connect with us

Dvgsuddi Kannada | online news portal | Kannada news online

ಮುಂದಿನ 24 ಗಂಟೆ ಈ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಪ್ರಮುಖ ಸುದ್ದಿ

ಮುಂದಿನ 24 ಗಂಟೆ ಈ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ಎರಡು ವಾರದಿಂದ ಸುಳಿಗಾಳಿ (ಸ್ಟ್ರಫ್) ವಾತಾವರಣ ತೀವ್ರಗೊಂಡಿದೆ. ಇದು ವಾಯುಭಾರ ಕುಸಿತಕ್ಕೆ ಕಾರಣವಾಗಿದ್ದು, ಇದರಿಂದ ರಾಜ್ಯದ ಎಲ್ಲಡೆ ಭಾರೀ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿಮೀ ಕಂಡು ಬರಲಿದೆ.

ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಕಲಬುರಗಿ ಜಿಲ್ಲೆಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಚದುರಿದ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top