ಬೆಂಗಳೂರು: ರಾಜ್ಯದಾದ್ಯಂತ ಆಗಸ್ಟ್ 27ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ದಾವಣಗೆರೆ ಜಿಲ್ಲೆಯಲ್ಲಿ 22.7 ಮಿ.ಮೀ. ಮಳೆಯಾಗಿದ್ದು, ಬೆಳೆ ಮತ್ತು ಮನೆ ಹಾನಿ ಸೇರಿ 21.65 ಲಕ್ಷ ರೂ. ನಷ್ಟ ಸಂಭವಿಸಿದೆ. ಮೆಕ್ಕೆಜೋಳ 15 ಹೆಕ್ಟೇರ್, ಈರುಳ್ಳಿ 3 ಹೆಕ್ಟೇರ್, ರಾಗಿ ಹಾಗೂ ಬಾಳೆ ಬೆಳೆ ತಲಾ 1 ಹೆಕ್ಟೇರ್ ಹಾನಿಗೊಳಗಾಗಿವೆ.22 ಮನೆಗಳು ಜಖಂ ಗೊಂಡಿವೆ. ದಾವಣಗೆರೆ ತಾಲೂಕಿನಲ್ಲಿ ಅತಿ ಹೆಚ್ಚು 30 ಮಿ.ಮೀ. ಮಳೆಯಾಗಿದೆ. ಜಗಳೂರು-29.4 ಮಿ.ಮೀ, ಹೊನ್ನಾಳಿ-25.4 ಮಿ.ಮೀ, ಚನ್ನಗಿರಿ-20.2 ಮಿ.ಮೀ, ನ್ಯಾಮತಿ-13.7 ಮಿ.ಮೀ, ಹರಿಹರ ತಾಲೂಕಿನಲ್ಲಿ 5.4 ಮಿ.ಮೀ. ಮಳೆಯಾಗಿದೆ. ಬುಧವಾರ ಸಂಜೆಯೂ ಕೆಲ ಹೊತ್ತು ಜೋರು ಮಳೆ ಸುರಿದಿದೆ.