ದಾವಣಗೆರೆ: 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಿದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ (ಎಚ್ ಎಸ್ ಆರ್ ಪಿ) ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಿದೆ. ಈ ಕೆಳಗೆ ಕೊಟ್ಟಿರುವ ಲಿಂಕ್ ಮೂಲಕ ಮನೆಯಿಂದಲೇ ಸರಳವಾಗಿ ಬುಕ್ ಮಾಡಿ , ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬಹುದು.
2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿ ಮಾಡಿದ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ವಾಹನ ಮಾಲೀಕರು ಆನ್‍ಲೈನ್ ವೆಬ್‍ಸೈಟ್ www.siam.in, hsrp karnataka book, my hsrp ಮತ್ತು book my hsrp ಗೆ ಭೇಟಿ ನೀಡಿ ನೋಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಿಕೊಳ್ಳಬೇಕು.
ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.siam.in/hrspsubmit.aspx?mpgid=91&pgidtrail=91 ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ, ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ಕೆ ಮಾಡಿಕೊಳ್ಳಬೇಕು. ಕಾಯ್ದಿರಿಸಿದ ಸಮಯಕ್ಕೆ ಸರಿಯಾಗಿ ಹೋಗಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬಹುದು. ಇದಲ್ಲದೇ ಮನೆಗೆ ಕರೆಸಿಕೊಳ್ಳಲು ಅವಕಾಶವೂ ಸಹ ಇದೆ.
ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ 6,16,353 ಖಾಸಗಿ ಹಾಗೂ ಸರ್ಕಾರಿ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಬೇಕಾಗಿದೆ. ಇದರಿಂದ ಅಪರಾಧಿಗಳು ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸುವ ನಕಲಿ ನೋಂದಣಿ ಸಂಖ್ಯೆಗಳನ್ನು ತಡೆಗಟ್ಟಬಹುದು ಮತ್ತು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನಗಳನ್ನು ಟ್ರ್ಯಾಕ್ ಮಾಡಲು ಅನುಕೂಲವಾಗಲಿದೆ.