Connect with us

Dvgsuddi Kannada | online news portal | Kannada news online

ವಾಹನ ಮಾಲೀಕರ ಗಮನಕ್ಕೆ; ಬೀದಿಬದಿಯ ಮಾರಾಟಗಾರರಿಂದ ನಕಲಿ IND ಮಾರ್ಕ್ ನ HSRP ನಂಬರ್ ಪ್ಲೇಟ್‌ ಅಳವಡಿಸುವಂತಿಲ್ಲ..!!

ಪ್ರಮುಖ ಸುದ್ದಿ

ವಾಹನ ಮಾಲೀಕರ ಗಮನಕ್ಕೆ; ಬೀದಿಬದಿಯ ಮಾರಾಟಗಾರರಿಂದ ನಕಲಿ IND ಮಾರ್ಕ್ ನ HSRP ನಂಬರ್ ಪ್ಲೇಟ್‌ ಅಳವಡಿಸುವಂತಿಲ್ಲ..!!

ದಾವಣಗೆರೆ: ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ/ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್‌ಪಿ) ಅಳವಡಿಸುವುದು ಕಡ್ಡಾಯವಾಗಿದೆ.

ಬೀದಿಬದಿಯ ಮಾರಾಟಗಾರರಿಂದ ನಕಲಿ IND
ಮಾರ್ಕ್ ನ HSRP ನಂಬರ್ ಪ್ಲೇಟ್‌ ಅಳವಡಿಸುವಂತಿಲ್ಲ. ಈ ನಂಬರ್ ಪ್ಲೇಟ್ ಅನ್ನು ಆನ್ ಲೈನ್ ನಲ್ಲಿಯೇ ಬುಕ್ ಮಾಡಬೇಕಿದ್ದು, ಆಫ್ ಲೈನ್ ನಲ್ಲಿ ಖರೀದಿಯ ಅವಕಾಶವಿಲ್ಲ.

ಪ್ರಮುಖ ಅಂಶಗಳು

  • https://transport.karnataka.gov.in ಅಥವಾ www.siam.in ಮೂಲಕ ಮಾತ್ರ HSRP ಅಳವಡಿಕೆಗೆ ಕಾಯ್ದಿರಿಸಿಕೊಳ್ಳಿ
  • ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND ಮಾರ್ಕ್/ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP / ಒಂದೇ ರೀತಿಯಪ್ಲೇಟ್‌ಗಳು/ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು ಊSಖP ಫಲಕಗಳಾಗಿರುವುದಿಲ್ಲ
  • HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ
  • ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ ಎಚ್‌ಎಸ್‌ಆರ್‌ಪಿ ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ
  • HSRP ಅಳವಡಿಕೆಗೆ ದಿನಾಂಕ: 17-11-2023ವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಸರ್ಕಾರದ ಅಧಿಸೂಚನೆ ದಿನಾಂಕ : 17-02-2024ರವರೆಗೆ ವಿಸ್ತರಿಸಲಾಗಿರುತ್ತದೆ
  • ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ. ಪಡೆಯಲು ತೊಂದರೆಗಳಾದಲ್ಲಿ ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಹಾಯವಾಣಿಯನ್ನು (helpline) ಕಛೇರಿ ಕಾರ್ಯದ ಸಮಯ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ಸಂಪರ್ಕಿಸಬಹುದಾಗಿದೆ. 944 9863429,9449863426 ಸಂಪರ್ಕಿಸಿ

ಆನ್ ಲೈನ್ ನಲ್ಲಿ ಹೆಚ್‌ಎಸ್‌ಆರ್‌ಪಿ ಪ್ಲೇಟ್ ಬುಕ್ ಮಾಡುವ ವಿಧಾನ

  1. ಹಳೆಯ ವಾಹನಗಳ ಮೇಲೆ ಹೆಚ್.ಎಸ್.ಆರ್.ಪಿ. ಅಳವಡಿಕೆಯ ಮಾಡಲು https://transport.karnataka.gov.in ಅಥವಾ www.siam.in ಗೆ ಬೇಟಿ ನೀಡಿ ಮತ್ತು Book HSRP ಯನ್ನು ಕ್ಲಿಕ್ ಮಾಡಿ
  2. ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
  3. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ
  4. HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ
  5. HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ
  6. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ ರವಾನಿಸಲಾಗುವುದು.
  7. ನಿಮ್ಮ ಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ
  8. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ
  9. ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top