Connect with us

Dvgsuddi Kannada | online news portal | Kannada news online

ಹುಬ್ಬಳ್ಳಿ-ಧಾರವಾಡ ಮಹಾ‌ನಗರ ಪಾಲಿಕೆ ಮೇಯರ್ ಚುನಾವಣೆ; ಬಿಜೆಪಿಗೆ ಭರ್ಜರಿ ಜಯ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಮುಖಭಂಗ

ಪ್ರಮುಖ ಸುದ್ದಿ

ಹುಬ್ಬಳ್ಳಿ-ಧಾರವಾಡ ಮಹಾ‌ನಗರ ಪಾಲಿಕೆ ಮೇಯರ್ ಚುನಾವಣೆ; ಬಿಜೆಪಿಗೆ ಭರ್ಜರಿ ಜಯ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಮುಖಭಂಗ

ಹುಬ್ಬಳ್ಳಿ: ತೀವ್ರ ಕುತೂಹಲ ‌ಮೂಡಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನ‌ಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದೆ. ಅದರಲ್ಲೂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಹಿನ್ನಡೆಯಾಗಿದೆ.

ಇಂದು ನಡೆದ ಚುನಾವಣೆಯಲ್ಲಿ 46 ಮತಗಳನ್ನು ಪಡೆಯುವ ಮೂಲಕ ಮೇಯರ್ ​ಆಗಿ ಬಿಜೆಪಿಯ ವೀಣಾ ಬಾರದ್ವಾಡ್​ ಆಯ್ಕೆಯಾಗಿದ್ದರೆ, ಬಿಜೆಪಿಯ ಸತೀಶ್ ಹಾನಗಲ್ ಸಹ 46 ಮತಗಳನ್ನು ಪಡೆಯುವ ಮೂಲಕ ಉಪ ಮೇಯರ್​ ಆಗಿ ಆಯ್ಕೆಯಾದರು. ಇನ್ನು ಮೇಯರ್ ಸ್ಥಾನಕ್ಕೆ ಕಾಂಗ್ರೆಸ್​​ ಪಕ್ಷದಿಂದ ಸುವರ್ಣ ಸ್ಪರ್ಧಿಸಿದ್ದು ಅವರ ಪರ 37 ಮತಗಳು ಮಾತ್ರ ಚಲಾವಣೆಗೊಂಡಿವೆ.

ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿತ್ತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಟ್ಟು ಸದಸ್ಯರ ಬಲ 82 ಆಗಿದ್ದು ಅಧಿಕಾರ ಹಿಡಿಯಲು 46 ಮತಗಳು ಬೇಕಿತ್ತು. ಬಿಜೆಪಿ ಕಾರ್ಪೊರೇಟರ್​ಗಳ ಸಂಖ್ಯೆ 39 ಇದ್ದು, ಕಾಂಗ್ರೆಸ್​​​​ 33, ಪಕ್ಷೇತರ 6, AIMIM 3, ಜೆಡಿಎಸ್ 1 ಸ್ಥಾನ ಹೊಂದಿತ್ತು. ಇನ್ನು 8 ಜನಪ್ರತಿನಿಧಿಗಳು, 4 ಶಾಸಕರು, 1 ಸಂಸದ, 3 ಎಂಎಲ್​ಸಿ ಪಾಲಿಕೆ ವ್ಯಾಪ್ತಿಯ ಜನಪ್ರತಿನಿಧಿಗಳು ಸೇರಿಸಿ ಒಟ್ಟು 90 ಮತಗಳಿದ್ದವು, ಇದರಲ್ಲಿ ಬಿಜೆಪಿ ಮೇಯರ್ ಅಭ್ಯರ್ಥಿ ಪರ 46 ಮತಗಳು ಚಲಾವಣೆಯಾಗಿದ್ದರೆ, ಕಾಂಗ್ರೆಸ್​ನ ಸುವರ್ಣ ಅವರ ಪರ 37 ಮತಗಳ ಚಲಾವಣೆಯಾಗಿವೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top