ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ನ್ಯಾಯಂಗ ಬಂಧನದಲಿದ್ದ ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಐಎಂಎ ಕೇಸ್ ನಲ್ಲಿ ಅರಪ್ಪನ ಜೈಲು ಸೇರಿದ್ದಂತ ಮಾಜಿ ಸಚಿವ ರೋಷನ್ ಬೇಗ್ ಜೈಲಿನಿಂದ ಬಿಡುಗಡೆ ಜಾಮೀನು ಸಕ್ಕಂತಾಗಿದೆ. ಐಎಂಎ ವಂಚನೆ ಪ್ರಕರಣದಲ್ಲಿ ಕಳೆದ ಇತ್ತೀಚೆಗಷ್ಟೇ ಸಿಬಿಐ ನಿಂದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮಂಜೂರು ರೋಷನ್ ಬೇಗ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ಇಂದು ರೋಷನ್ ಬೇಗ್ ಗೆ ಷರತ್ತು ಬದ್ಧ ಜಾಮೀನು ನೀಡಿದೆ. ಕರೆದಾಗ ಬರುವಂತೆ ಸೂಚಿಸಿ ಜಾಮೀನು ನೀಡಿದೆ.



