ಬೆಂಗಳೂರು: ಯುಪಿಐ ಮೂಲಕ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ನೀಡಿರುವ ಜಿಎಸ್‌ಟಿ ನೋಟಿಸ್ ರಾಜ್ಯ ಸರ್ಕಾರದಲ್ಲ, ಇದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಜಿಎಸ್‌ಟಿ ಕಾಯ್ದೆ ಮಾಡಿರುವುದು ಕೇಂದ್ರ ಸರ್ಕಾರ. ಜಿಎಸ್‌ಟಿ ಕೌನ್ಸಿಲ್ ಕೂಡ ರಾಜ್ಯ ಸರ್ಕಾರದ ಅಧೀನದಲ್ಲಿ ಇಲ್ಲ. ಹೀಗಾಗಿ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಗೆ ವಿಚಾರ ಕೇಂದ್ರ ಸರ್ಕಾರವೇ ಹೊಣೆಗಾರಿಕೆಯಾಗುತ್ತದೆ ಎಂದರು.
ರಾಜ್ಯ ಸರ್ಕಾರದಿಂದ ಸಣ್ಣ ವ್ಯಾಪಾರಿಗಳಿಗೆ ಅನುಕೂಲ ಮಾಡಲು ಯಾವುದಾದರೂ ಅವಕಾಶಗಳು ಇದ್ರೆ, ಈ ಬಗ್ಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತೇವೆ. ಕೇಂದ್ರ ಸರ್ಕಾರದ ಜೊತೆಗೂ ಈ ಬಗ್ಗೆ ಸಮಾಲೋಚನೆ ನಡೆಸುವುದಾಗಿ ಹೇಳಿದರು.



