ಹಾಸನ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಿಲ್ಲಾ ಮತ್ತು ತಾಲ್ಲೂಕು ನೀರು ಪರೀಕ್ಷಾ ಪ್ರಯೋಗಾಲಯಗಳಿಗೆ ಅನಾಲಿಸ್ಟ್ ಮತ್ತು ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 22 ರೊಳಗೆ ಅರ್ಜಿ ಸಲ್ಲಿಸಬಹುದು.
ಅನಾಲಿಸ್ಟ್ ಹುದ್ದೆಗಳಿಗೆ ಬಿ.ಎಸ್ಸಿ ಮತ್ತು ಕಲೆಕ್ಟರ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅನಾಲಿಸ್ಟ್ ಹುದ್ದೆಗಳಿಗೆ ಗರಿಷ್ಟ 45 ವರ್ಷ ಮತ್ತು ಕಲೆಕ್ಟರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಅನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ಮತ್ತು ಕಲೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,000/-ರೂ ವೇತನವನ್ನು ನೀಡಲಾಗುವುದು.ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕಚೇರಿಗೆ ಮಾರ್ಚ್ 22,2021ರ ಸಂಜೆ 5:30ರೊಳಗೆ ಸಲ್ಲಿಸಬಹುದು.
ಕಚೇರಿ ವಿಳಾಸ:ಕಾರ್ಯಪಾಲಕ ಇಂಜಿನಿಯರ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಜಿಲ್ಲಾ ಪಂಚಾಯತ್ ಕಟ್ಟಡ, ಎನ್.ಆರ್. ವೃತ್ತ ಹಾಸನ.



