KPSC: 230 ಕಮರ್ಷಿಯಲ್ ಟ್ಯಾಕ್ಸ್​ ಇನ್ಸ್​ಪೆಕ್ಟರ್ ಹುದ್ದೆ ಭರ್ತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC Recruitment) ಖಾಲಿ ಇರುವ ಒಟ್ಟು 230 ಕಮರ್ಷಿಯಲ್ ಟ್ಯಾಕ್ಸ್​ ಇನ್ಸ್​ಪೆಕ್ಟರ್ (RPC) ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿತ್ತು. ಈ ಹಿಂದೆ ಸೆಪ್ಟಂಬರ್‌ 30ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಹೇಳಲಾಗಿತ್ತು.ಆದರೆ ಇದೀಗ ದಿನಾಂಕವನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ kpsc.kar.nic.in ಭೇಟಿ ನೀಡಿ.

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ: ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟಂಬರ್‌ 30, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ/ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಎಚ್‌/ ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು- 50 ರೂ. ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ ಪ್ರವರ್ಗ-1 & ಪಿಎಚ್‌ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಆನ್​ಲೈನ್ ಮೂಲಕವೇ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ ವಿಧಾನ; ಕೆಪಿಎಸ್‌ಸಿ ನೇಮಕಾತಿ ಅಧಿಸೂಚನೆ 2023 ಅನ್ನು ವಿವರವಾಗಿ ಪರಿಶೀಲಿಸಿ ಮತ್ತು ಅರ್ಹತಾ ಮಾನದಂಡ ಹೊಂದಿದ್ದೀರಿ ಎನ್ನುವುದನ್ನು ಖಚಿತಪಡಿಸಿಕೊಳ್ಳಿ.
ಅರ್ಜಿ ಭರ್ತಿ ಮಾಡುವಾಗ ಸಂವಹನ ನಡೆಸಲು ಅಗತ್ಯವಾದ ನಿಖರವಾದ ಇಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ನಮೂದಿಸಿ. ಜೊತೆಗೆ ಅರ್ಜಿ ಭರ್ತಿ ಸಲ್ಲಿಸುವ ಮುನ್ನವೇ ಐಡಿ ಪ್ರೂಫ್‌, ವಯಸ್ಸಿನ ದಾಖಲಾತಿ, ಶೈಕ್ಷಣಿಕ ಅರ್ಹತೆಯ ದಾಖಲೆ, ರೆಸ್ಯೂಮ್‌, ಔದ್ಯೋಗಿಕ ಅನುಭವಗಳ ದಾಖಲೆಗಳು ಅಗತ್ಯವಾಗಿವೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-30574957/30574901 ಅನ್ನು ಸಂಪರ್ಕಿಸಿ. ಮೈಸೂರು ಕಚೇರಿ ದೂರವಾಣಿ ಸಂಖ್ಯೆ: 0821-2545956. ಬೆಳಗಾವಿ ಕಚೇರಿ 0831-2475345, ಕಲಬುರಗಿ ಕಚೇರಿ 08472-227944, ಶಿವಮೊಗ್ಗ ಕಚೇರಿ 08182-228099.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *