ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT) ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಹುದ್ದೆ ಭರ್ತಿ ಮಾಡಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅಧಿಕೃತ ವೆಬ್‌ಸೈಟ್ ksat.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಸ್ಟೆನೋಗ್ರಾಫರ್ (RPC)- 7 ಹುದ್ದೆ, ಸ್ಟೆನೋಗ್ರಾಫರ್ (LC)- 1 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ ಪಾಸಾಗಿರಬೇಕು. ಜತೆಗೆ ಸ್ಟೆನೋಗ್ರಾಫರ್ ಪರಿಣತಿ ಹೊಂದಿರಬೇಕು. ಸ್ಟೆನೋಗ್ರಾಫರ್ (RPC)- ಈ ಹುದ್ದೆಗಳಿಗೆ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಟೆನೋಗ್ರಾಫರ್ (LC)- ಈ ಹುದ್ದೆಗಳಿಗೆ 18 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು SC/ST/ ಅಭ್ಯರ್ಥಿಗಳಿಗೆ 5 ವರ್ಷಗಳ ಹಾಗೂ ಪ್ರವರ್ಗ-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಹಾಗೆಯೇ ವಿಧವಾ/PH ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇದೆ. ಸಾಮಾನ್ಯ ಅಭ್ಯರ್ಥಿಗಳಿಗೆ- 150 ರೂ. SC/ST, ಪ್ರವರ್ಗ-1 ಮತ್ತು PH ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 30 ಸಾವಿರದಿಂದ 58 ಸಾವಿರದವರೆಗೆ ವೇತನ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಲೀಸ್ಟ್ ಮಾಡಲಾಗುತ್ತದೆ. ಸಂದರ್ಶನಕ್ಕೆ ಕರೆದು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಯೊಂದಿಗೆ ಅಂಚೆಯ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು. ಅರ್ಜಿ ಕಳುಹಿಸಬೇಕಾದ ವಿಳಾಸ:
Registrar, K.S.A.T, 7th Floor, Kandaya Bhavana, K.G. Road, Bengaluru-560009. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್: ksat.karnataka.gov.in ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಜನವರಿ ಕೊನೆ ದಿನವಾಗಿದೆ.