Connect with us

Dvgsuddi Kannada | online news portal | Kannada news online

ಶೀಘ್ರವೇ ಪಶು ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯ; 200 ನಿರೀಕ್ಷಕರ ನೇಮಕ; ಸಚಿವ ವೆಂಕಟೇಶ್

images 45

ಪ್ರಮುಖ ಸುದ್ದಿ

ಶೀಘ್ರವೇ ಪಶು ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯ; 200 ನಿರೀಕ್ಷಕರ ನೇಮಕ; ಸಚಿವ ವೆಂಕಟೇಶ್

ಬೆಂಗಳೂರು: ಪಶು ಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, ಎರಡು ತಿಂಗಳಲ್ಲಿ 200 ಪಶು ವೈದ್ಯಕೀಯ ನಿರೀಕ್ಷಕರು, ವರ್ಷಾಂತ್ಯದ ವೇಳೆಗೆ 400 ಪಶು ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನಾ ಸಚಿವ ವೆಂಕಟೇಶ್ ಹೇಳಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳಿ ಅವರ ಪ್ರಶ್ನೆಗೆ ಉತ್ತರಿಸಿದರು. ಪಶು ಸಂಗೋಪನಾ ಇಲಾಖೆಯಲ್ಲಿ ಪಶು ವೈದ್ಯರು, ಪಶು ವೈದ್ಯಕೀಯ ನಿರೀಕ್ಷಕರ ಕೊರತೆ ಇದೆ. ಇದನ್ನು ಸರಿಪಡಿಸಲು ಇನ್ನೆರಡು ತಿಂಗಳಲ್ಲಿ ಪಶು ವೈದ್ಯಕೀಯ ನಿರೀಕ್ಷಕರ ಮತ್ತು ಡಿಸೆಂಬರ್ ವೇಳೆಗೆ 400 ಪಶು ವೈದ್ಯರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ವಿವಿಧ ಜಿಲ್ಲೆಗಳಲ್ಲಿ ಹೆಚ್ಚುವರಿಯಾಗಿರುವ ಹೊಸ ವೈದ್ಯರು ಮತ್ತು ಪಶು ವೈದ್ಯಕೀಯ ನಿರೀಕ್ಷಕರನ್ನು ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು. 30 ಹೊಸ ಪಶು ವೈದ್ಯಕೀಯ ಆಸ್ಪತ್ರೆಗಳ ಮಂಜೂರಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅಗತ್ಯವಿರುವಡೆ ಹೊಸ ಆಸ್ಪತ್ರೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top