ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ 39 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಚಾರ್ಟರ್ಡ್ ಅಕೌಂಟೆಂಟ್ ಜೂನಿಯರ್ ಅಸಿಸ್ಟಂಟ್, ಚಾಲಕ ಸೇರಿ ಒಟ್ಟು 39 ಹುದ್ದೆಗಳಿವೆ.ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನ.
ಹುದ್ದೆ ಮತ್ತು ವಿದ್ಯಾರ್ಹತೆ: ಚಾರ್ಟರ್ಡ್ ಅಕೌಂಟೆಂಟ್ ಹುದ್ದೆಗೆ ಸಿಎ, ಸಿಎಸ್, ಐಸಿಡಬ್ಲ್ಯುಎ ವಿದ್ಯಾರ್ಹತೆ ಇರಬೇಕಿದ್ದು, ಕಾನೂನು ಅಧಿಕಾರಿ ಹುದ್ದೆಗಳಿಗೆ ಎಲ್‌ಎಲ್‌ಬಿ, ಕಾನೂನು ವಿಷಯದಲ್ಲಿ ಪದವಿ ಪಡೆದಿರಬೇಕು. ಹಾಗೇ ಎಚ್‌ಆರ್ ಆಫೀಸರ್ ಹುದ್ದೆಗೆ ಎಚ್‌ಆರ್ ವಿಷಯದಲ್ಲಿ ಎಂಬಿಎ ಆಗಿರಬೇಕು, ತರಬೇತಿ ಅಧಿಕಾರಿ ಹುದ್ದೆಗೆ ಎಂಎ, ಎಂಎಸ್‌ಡಬ್ಲ್ಯು ಪದವಿ ಪಡೆದಿರಬೇಕು.ಇನ್ನೂ ಫ್ರೆಂಡ್ಲಿ ಡೆವಲಪ್‌ಮೆಂಟ್ ಆಫೀಸರ್, ಸಹಾಯಕರು, ಟೈಪಿಸ್ಟ್ & ಸ್ಟೆನೊ ಹುದ್ದೆಗಳಿಗೆ ಯಾವುದೇ ಪದವಿ ಪಡೆದಿರಬೇಕಾಗಿದ್ದು, ಜೂನಿಯರ್ ಅಸಿಸ್ಟೆಂಟ್ ಹಾಗೂ ಡೆಪ್ಯುಟಿ ಸ್ಟಾಫ್ & ವೆಹಿಕಲ್ ಹುದ್ದೆಗಳಿಗೆ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಇರಬೇಕು.
ಈ ವಿವಿಧ ಹುದ್ದೆಗಳಿಗೆ ಅನುಗುಣವಾಗಿ 25 ವರ್ಷದಿಂದ 35 ವರ್ಷದೊಳಿಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿ ಶುಲ್ಕ: ಚಾರ್ಟರ್ಡ್ ಅಕೌಂಟೆಂಟ್, ಲಾ ಆಫೀಸರ್, ಎಚ್‌ಆರ್ ಆಫೀಸರ್, ಟ್ರೈನಿಂಗ್ ಆಫೀಸರ್, ಫ್ರೆಂಡ್ಲಿ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಇನ್ನು ಸಹಾಯಕರು, ಟೈಪಿಸ್ಟ್ ಮತ್ತು ಸ್ಟೆನೋ, ಜೂನಿಯರ್ ಅಸಿಸ್ಟೆಂಟ್, ಡೆಪ್ಯುಟಿ ಸ್ಟಾಫ್ ಮತ್ತು ವೆಹಿಕಲ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಪಾವತಿಸಬೇಕು. ಆಫ್‌ಲೈನ್ ಮೂಲಕವೇ ಅರ್ಜಿ ಶುಲ್ಕ ಪಾವತಿಸಬೇಕು.
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.ಆಯ್ಕೆಯಾದ ಅಭ್ಯರ್ಥಿಗಳ ಹುದ್ದೆಗೆ ಅನುಗುಣವಾಗಿ 13,000 ರೂ. 70,000 ಮಾಸಿಕ ವೇತನ ದೊರೆಯಲಿದೆ. ಮೇಲಿನ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು www.souharda.coop ನಿಂದ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಹಾಗೂ ಅದರೊಂದಿಗೆ ಅರ್ಹತಾ ದಾಖಲೆಗಳು / ಶೈಕ್ಷಣಿಕ ದಾಖಲೆಗಳನ್ನು ಲಗತ್ತಿಸಿ ಕೆಳಗಿನ ವಿಳಾಸಕ್ಕೆ ಸಲ್ಲಿಸುವುದು. ಜು.26 ರೊಳಗೆ ತಲುಪುವಂತೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಸೌಹಾರ್ಧ ಸಹಕಾರಿ ಸೌಧ, ನಂ 68, ಒಂದನೇ ಮಹಡಿ, 17 & 18ನೇ ಅಡ್ಡರಸ್ತೆ ಮಧ್ಯೆ, ಮಾರ್ಗೋಸಾ ರಸ್ತೆ, ಮಲ್ಲೇಶ್ವರಂ, ಬೆಂಗಳೂರು -560055.ಜು.26 ರೊಳಗೆ ತಲುಪುವಂತೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ souharda.coop ಇಲ್ಲಿಗೆ ಭೇಟಿ ನೀಡಿ.