ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ” ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ ತರಬೇತಿಗಾಗಿ ಅರ್ಹಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಪದವಿ ಹಾಗೂ ಮೇಲ್ಪಟ್ಟು (psychology / social work ಪದವಿ ತೇರ್ಗಡೆ ಹೊಂದಿದವರಿಗೆ ಆದ್ಯತೆ ನೀಡಲಾಗುವುದು) ಕನಿಷ್ಠ ವಯಸ್ಸು 21 ರಿಂದ 35 ವರ್ಷಗಳ ಹೊಂದಿರಬೇಕು. ಆಸಕ್ತರು ತಮ್ಮ ಸಂಪೂರ್ಣ ವೈಯುಕ್ತಿಕ ವಿವರಗಳೊಂದಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಶ್ರೀಕಂಠೀರವ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಗೇಟ್ ನಂ.12, ಕೊಠಡಿ ಸಂಖ್ಯೆ : 17-18, ಬೆಂಗಳೂರು -560 001 ಇಲ್ಲಿ ಡಿಸೆಂಬರ್ 30 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-2223 9771 / 9480886545 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



