ಬೆಂಗಳೂರು: ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದ ಕೇಂದ್ರ ಕಚೇರಿಯಲ್ಲಿ ಖಾಲಿ ಇರುವ ವಿವಿಧ 5 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜನರಲ್ ಮ್ಯಾನೇಜರ್ – 1: ಕೃಷಿ/ ಕೃಷಿ ಮಾರುಕಟ್ಟೆ/ ಎಣ್ಣೆ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಜ್ಞಾನದ ಜತೆ ವೃತ್ತಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಮಾಸಿಕ 1,04,600-1,50,600 ರೂ. ವರೆಗೆ ವೇತನ ಇದ್ದು, 40-50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಸಿಸ್ಟೆಂಟ್ ಮ್ಯಾನೇಜರ್ – 2: ಸ್ನಾತಕೋತ್ತರ ಕೃಷಿ ಪದವಿ ಪಡೆದಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರುವ 18 ರಿಂದ 40 ವರ್ಷದೊಳಗಿನ (ಮೀಸಲಾತಿ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇದೆ) ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವ ಅವಶ್ಯ. ಮಾಸಿಕ 43,100-83,900 ರೂ. ವೇತನ ಇದೆ.
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ -1 : ಪದವಿ ಪಡೆದಿದ್ದು, 2 ವರ್ಷ ವೃತ್ತಿ ಅನುಭವ ಹೊಂದಿರುವ ಕನಿಷ್ಠ 18 ರಿಂದ ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಮಾಸಿಕ 21,400-42,000ರೂ. ವೇತನ ಇದೆ. ಕಂಪ್ಯೂಟರ್ ಜ್ಞಾನ ಅವಶ್ಯ.
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಗುಣಮಟ್ಟ ನಿಯಂತ್ರಣ) – 1: ಬಿಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ಅಧ್ಯಯನ ಮಾಡಿದ್ದು, ಕನಿಷ್ಠ 2 ವರ್ಷದ ವೃತ್ತಿ ಅನುಭವ ಹೊಂದಿರುವ 18-40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಜ್ಞಾನ ಅವಶ್ಯ. ಮಾಸಿಕ 21,400-42,000ರೂ. ವೇತನ ನಿಗದಿಯಾಗಿದೆ.
ಆಯ್ಕೆ ವಿಧಾನ: ನಿಗದಿಪಡಿಸಲಾದ ವಿದ್ಯಾರ್ಹತೆ, ವೃತ್ತಿ ಅನುಭವ, ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದ ಅಂಕಗಳನ್ನು ಆಧರಿಸಿ ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ: ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 1000 ರೂ., ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿಯಾಗಿದೆ. ಅರ್ಜಿ ಸಲ್ಲಿಸಲು ಕೊನೇ ದಿನ: 8.4.2021. ಅರ್ಜಿ ಸಲ್ಲಿಕೆ ವಿಳಾಸ: ವ್ಯವಸ್ಥಾಪಕ ನಿರ್ದೇಶಕರು, ಕೆಸಿಒಜಿಎಫ್. ಲಿ, ನಂ.11, 4ನೇ ಮಹಡಿ, ಇನ್ಫೆಂಟ್ರಿ ಅಡ್ಡರಸ್ತೆ, ಬೆಂಗಳೂರು-01. ಮಾಹಿತಿಗೆ:http://www.kof.co.in ಸಂಪರ್ಕಿಸಿ.