ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ನ. 30 ಕೊನೆಯ ದಿನವಾಗಿದೆ.
ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) 7, ಡೆಪ್ಯೂಟಿ ಮ್ಯಾನೇಜರ್ 17 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧವಿರಬೇಕು. ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಸಿವಿಲ್ ಇಂಜಿನಿಯರಿಂಗ್ ಹಾಗೂ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ವಾಣಿಜ್ಯ ಪದವಿ, ಸಿಎ, ಎಂಬಿಎ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
15,600 ರಿಂದ 177500 ರೂ. ತನಕ ವೇತನ ನಿಗದಿ ಮಾಡಲಾಗಿದೆ. ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) ಹುದ್ದೆಗೆ 30 ಮತ್ತು ಡೆಪ್ಯೂಟಿ ಮ್ಯಾನೇಜರ್ (ಎಫ್ & ಎ) 35 ವರ್ಷಗಳ ವಯೋಮಿತಿ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3, ಎಸ್‌ಸಿ/ ಎಸ್‌ಟಿ 5, ಅಂಗವಿಕಲ 10, ಅಂಗವಿಕಲ (ಒಬಿಸಿ) 13, ಅಂಗವಿಕಲ (ಎಸ್‌ಸಿ/ ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 500 ರೂ. ಶುಲ್ಕವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 18004253800, 08026599990/0120-2497771 ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ.ಆಸಕ್ತರು ಹೆಚ್ಚಿನ ಮಾಹಿತಿಗಾಗಿ nhai.gov.in ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.