Connect with us

Dvgsuddi Kannada | online news portal | Kannada news online

400 ಪಶುವೈದ್ಯಕೀಯ ಆಫೀಸರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

400 ಪಶುವೈದ್ಯಕೀಯ ಆಫೀಸರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ (Animal Husbandry & Veterinary Services Karnataka) ಖಾಲಿ ಇರುವ 400  ವೆಟರ್ನರಿ ಆಫೀಸರ್  ಹುದ್ದೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 31ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ahvs.kar.nic.in ಗೆ ಭೇಟಿ ನೀಡಿ.

ಬಿವಿಎಸ್ಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.  ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಶೇ.50ರಷ್ಟು ಅಂಕಗಳೊಂದಿಗೆ ಬಿ.ವಿ.ಎಸ್ಸಿ, ಬಿ.ವಿ.ಎಸ್ಸಿ(AH) ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ-ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ವೆಟರ್ನರಿ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 52,650-97,100 ವೇತನ ನೀಡಲಾಗುತ್ತದೆ.

  • ಆಯ್ಕೆ ಪ್ರಕ್ರಿಯೆ:
  • ಕನ್ನಡ ಭಾಷಾ ಪರೀಕ್ಷೆ
  • ಮೆರಿಟ್ ಲಿಸ್ಟ್​
  • ದಾಖಲಾತಿ ಪರಿಶೀಲನೆ
  • ಸಂದರ್ಶನ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top