ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 188 ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಆಹ್ವಾನಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ ಫೆಬ್ರವರಿ 21 ರಂದು ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ.
ಮೂಲ ವೃಂದ 129, ಕಲ್ಯಾಣ ಕರ್ನಾಟಕಕ್ಕೆ ಮೀಸಲಾದ 59 ಹುದ್ದೆಗಳು ಸೇರಿದಂತೆ ಒಟ್ಟು 188 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು.ಮಾರ್ಚ್ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಾರ್ಚ್ 31 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ಮತ್ತು ಹೆಚ್ಚಿನ ಮಾಹಿತಿಗಾಗಿ http://kpsc.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ.



