ಬೆಂಗಳೂರು: ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 832 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಐಬಿಪಿಎಸ್ ಮೂಲಕ ದೇಶದ 43 ಗ್ರಾಮೀಣ ಬ್ಯಾಂಕ್ ಗಳಲ್ಲಿ 8,106 ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಬಳ್ಳಾರಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ ಹುದ್ದೆ ಭರ್ತಿಗೆ ಅರ್ಜಿ ಸಲ್ಲಿಸಬಹುದು.ಜೂನ್ 7ರಂದು ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನ. ಸೆಪ್ಟಂಬರ್ ಅಥವಾ ಅಕ್ಟೋಬರ್‌ನಲ್ಲಿ ಪರೀಕ್ಷೆ ನಡೆಸಿ, ನವೆಂಬರ್‌ನಲ್ಲಿ ಸಂದರ್ಶನ ನಡೆಸಲು ಐಬಿಪಿಎಸ್ ನಿರ್ಧರಿಸಿದೆ. ರಾಜ್ಯದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ಜತೆಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಐಬಿಪಿಎಸ್ ನೀಡಿದೆ.
ದೇಶದಲ್ಲಿ 8,106 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಹುದ್ದೆಗಳ ಸಂಖ್ಯೆಯೇ 4,483, ಆಫೀಸರ್ ಸ್ಕೇಲ್- ಐರ ಹುದ್ದೆ 2,676, ಆಫೀಸರ್ ಸ್ಕೇಲ್-ಐಐ ರ ಹುದ್ದೆ 867 ಮತ್ತು ಆಫೀಸರ್ ಸ್ಕೇಲ್-ಐಐಐರ 80 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಬ್ಯಾಂಕ್‌ಗಳಲ್ಲಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ಸಂಖ್ಯೆಯೇ 173, ಆಫೀಸರ್ ಸ್ಕೇಲ್- ಐರ 429 ಮತ್ತು ಆಫೀಸರ್ ಸ್ಕೇಲ್-ಐಐ ರ 230 (ಜನರಲ್ ಬ್ಯಾಂಕಿಂಗ್) ಹುದ್ದೆಗಳಿಗೆ ನೇಮಕ ನಡೆಯಲಿದೆ.
ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಡ್ಯ ಮೈಸೂರು,ಶಿವಮೊಗ್ಗ, ಮಂಗಳೂರು ಮತ್ತು ಉಡುಪಿಯಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ.ಮುಖ್ಯಪರೀಕ್ಷೆಗಳು ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗದಲ್ಲಿ ನಡೆಯಲಿದೆ.
ಸಾಮಾನ್ಯ ಮತ್ತು ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 850 ರೂ. ಹಾಗೂ ಎಸ್‌ಸಿ/ಎಸ್‌ಟಿ/ಅಂಗವಿಕಲರು/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 175 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಶನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ. ಆನ್‌ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.
ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ 18ರಿಂದ 28 ವರ್ಷ. ಆಫೀಸರ್ ಸ್ಕೇಲ್-ಐ ಹುದ್ದೆಗೆ ಅಭ್ಯರ್ಥಿಗಳು 18ರಿಂದ 30 ವರ್ಷದೊಳಗಿನವರಾಗಿರಬೇಕು. ಆಫೀಸರ್ ಸ್ಟೇಲ್-ಐಐ ಹುದ್ದೆಗೆ 21ರಿಂದ 32 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಆಫೀಸರ್ ಸ್ಟೇಲ್-ಐಐಐ ಹುದ್ದೆಯ ಆಕಾಂಕ್ಷಿಗಳು 21ರಿಂದ 40 ವರ್ಷದೊಳಗಿನವರಾಗಿರಬೇಕು.
ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗೆ ಸಂಬಂಧಿಸಿದ ಎಲ್ಲ ಮಾಹಿತಿ ಕೈಪಿಡಿಯಲ್ಲಿ ಇರುತ್ತದೆ. ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಮೆರಿಟ್ ಲಿಸ್ಟ್ ಸಿದ್ಧಪಡಿಸುವಾಗ ಅಭ್ಯರ್ಥಿಯು ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಈ ಹುದ್ದೆಯ ನೇಮಕ ಪ್ರಕ್ರಿಯೆಯಲ್ಲಿ ಸಂದರ್ಶನ ಇರುವುದಿಲ್ಲ. ಆಫೀಸರ್ ಸ್ಟೇಲ್-ಐ ಹುದ್ದೆಗೆ ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. ಹೆಚ್ಚಿನ ಮಾಹಿತಿಯನ್ನು ಐಬಿಪಿಎಸ್ ನ ಅಧಿಕೃತ ವೆಬ್ ಸೈಟ್‌ನಲ್ಲಿ ಪಡೆದು ಅರ್ಜಿ ಸಲ್ಲಿಸಿ.
ಹೆಚ್ಚಿನ ಮಾಹಿತಿಗೆ: https://www.ibps.in/ ವೆಬ್ ಸೈಟ್ ಗೆ ಭೇಟಿ ನೀಡಿ.