Connect with us

Dvgsuddi Kannada | online news portal | Kannada news online

ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಸಂದರ್ಶನ ; 56 ಸಾವಿರ ವೇತನ..!

ಪ್ರಮುಖ ಸುದ್ದಿ

ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಸಂದರ್ಶನ ; 56 ಸಾವಿರ ವೇತನ..!

ಶಿವಮೊಗ್ಗ: ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿ ಸಂಬಂಧ ಮಾರ್ಚ್ 01 ರಂದು ಸಂದರ್ಶನ ನಡೆಯಲಿದೆ.

ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ಪಶುವೈದ್ಯಕೀಯ ರೋಗಶಾಸ್ತ್ರ, ಹಾಗೂ ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು. ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700/- ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000/- ವೇತನವಾಗಿ ಪಾವತಿಸಲಾಗುವುದು.

ಸಂದರ್ಶನವನ್ನು ಮಾರ್ಚ್ 01 ರ ಬೆಳಗ್ಗೆ 11 ಗಂಟೆಯಿಂದ ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ ಇಲ್ಲಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 08182-200872 ಹಾಗೂ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ನ್ನು ಸಂಪರ್ಕಿಸಬಹುದೆಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top