ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ವಿವಿಧ ಸಹಕಾರಿ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಸುಮಾರು 5 ಸಾವಿರ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಈಗಾಗಲೇ ಖಾಲಿ ಇರುವ ಹುದ್ದೆಗಳ ಭರ್ತಿ ಆರಂಭಿಸುವಂತೆ ಸೂಚನೆ ನೀಡಲಾಗಿದ್ದು, ಸಹಕಾರಿ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಸುಮಾರು 5 ಸಾವಿರ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದುಉ ತಿಳಿಸಿದ್ದಾರೆ.ಇನ್ನು ಸಹಕಾರ ಇಲಾಖೆಯಿಂದ ಪತ್ರಕರ್ತರಿಗೆ ದೊರೆಯುವ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ.



