ದಾವಣಗೆರೆ:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕನ್ನಡ ಭಾಷೆ, ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಸಂಬಂಧಿಸಿದ ವಿಷಯಗಳಿಗೆ ಎಂ.ಫಿಲ್ ಮತ್ತು ಪಿಎಚ್ ಡಿ ವಿದ್ಯಾರ್ಥಿಗಳ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
2019-20ನೇ ಸಾಲಿನಲ್ಲಿ ವಿಶ್ವವಿದ್ಯಾನಿಲಯಗಳಿಂದ ಕನ್ನಡದಲ್ಲಿ ಎಂ.ಫಿಲ್ ಪದವಿ ಪಡೆದ ಪ್ರೌಢಪ್ರಬಂಧಗಳು ಮತ್ತು ಕನ್ನಡದಲ್ಲಿ ಪಿಹೆಚ್‍ಡಿ ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸಹಾಯಧನ. 2019ರ ಜನವರಿಯಿಂದ ಡಿಸೆಂಬರ್ 2019 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಸೃಜನೇತರ ಕನ್ನಡ ಗ್ರಂಥಗಳಿಗೆ ಸಹಾಯಧನ ನೀಡಲಾಗುವುದು.
ಪಿಹೆಚ್‍ಡಿ ಮತ್ತು ಎಂ.ಫಿಲ್ ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸೇವಾಸಿಂಧು ಮೂಲಕ ಹಾಗೂ ಸೃಜನೇತರ ಪ್ರಕಟಿತ ಗ್ರಂಥಗಳಿಗೆ ನೇರವಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ನಮೂನೆಗಳನ್ನು ವೆಬ್‍ಸೈಟ್ www.kannadasiri.co.in ನಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು 2020 ರ ಜನವರಿ 16 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಠಡಿ ಸಂಖ್ಯೆ :27, ಪಿ.ಬಿ.ರಸ್ತೆ ದಾವಣಗೆರೆ ದೂ.ಸಂ : 08192-234849ನ್ನು ಸಂಪರ್ಕಿಸಬಹುದೆದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
		 
		 
		 
		

