Connect with us

Dvg Suddi-Kannada News

ಕೆಲಸಕ್ಕೆ ಹಾಜರಾಗದ ಸಾರಿಗೆ ನೌಕರರಿಗೆ ಸಂಬಳವಿಲ್ಲ: ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ

ರಾಜ್ಯ ಸುದ್ದಿ

ಕೆಲಸಕ್ಕೆ ಹಾಜರಾಗದ ಸಾರಿಗೆ ನೌಕರರಿಗೆ ಸಂಬಳವಿಲ್ಲ: ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ

ಬೀದರ್ : ಕೆಲಸಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗಳ ವೇತನವನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ.  ಮುಂದಿನ ದಿನಲ್ಲಿ ಇನ್ನಷ್ಟು ಬಿಗಿಯಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗಬೇಕು.  ಹಬ್ಬಗಳ ಸಮಯದಲ್ಲಿ ಸಾರಿಗೆ ಸಿಬ್ಬಂದಿ ಪ್ರಯಾಣಿಕರಿಗೆ ತೊಂದರೆ ಕೊಡುವುದು ಸರಿಯಲ್ಲ. ಪ್ರತಿಭಟನೆ ಮಾಡುವವವರ ವಿರುದ್ಧ ಕ್ರಮ ಅನಿವಾರ್ಯವಾಗುತ್ತದೆ ಎಂದರು.

ಯಾರ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಕೈಗೊಳ್ಳಲಾಗಿದೆ.  ಕಷ್ಟ ಸಮಯದಲ್ಲೂ 2,300 ಕೋಟಿ ರೂ. ಸಂಬಳವನ್ನು ಸರ್ಕಾರದಿಂದ ಕೊಡಲಾಗಿದ್ದು, ಅಗತ್ಯ ಸಹಕಾರವನ್ನು ಸಹ ನೀಡಲಾಗಿದೆ.  ಯಾರದ್ದೋ ಮಾತು ಕೇಳಿಕೊಂಡು ಮುಷ್ಕರ ಮಾಡುವುದು ಸರಿಯಲ್ಲ ಎಂದು ಪರೋಕ್ಷವಾಗಿ ಕೋಡಿಹಳ್ಳಿ ಚಂದ್ರಶೇಖರ ವಿರುದ್ಧ ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

 

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top