Connect with us

Dvg Suddi-Kannada News

ಖ್ಯಾತ ಕವಿ ಡಾ. ಸಿದ್ಧಲಿಂಗಯ್ಯ ವಿಧಿವಶ

ಪ್ರಮುಖ ಸುದ್ದಿ

ಖ್ಯಾತ ಕವಿ ಡಾ. ಸಿದ್ಧಲಿಂಗಯ್ಯ ವಿಧಿವಶ

ಬೆಂಗಳೂರು: ಕೊರೊನಾ ಸೋಂಕು ಮತ್ತು ನ್ಯುಮೋನಿಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದ ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ(67) ಚಿಕಿತ್ಸೆ ಫಲಿಸದೇ ಇಂದು ವಿಧಿವಶರಾಗಿದ್ದಾರೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಂತ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಕೊರೊನಾ  ಪಾಸಿಟಿವ್ ಬಂದಿತ್ತು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಸೋಂಕಿನಿಂದ  ಚೇತರಸಿಕೊಳ್ಳದೇ ಸಾವನ್ನಪ್ಪಿದ್ದಾರೆ.  ಈ ಮೂಲಕ ಬಂಡಾಯ ಸಾಹಿತ್ಯ ಲೋಕದ ಮತ್ತೊಂದು  ಕೊಂಡಿಯೊಂದು ಕಳಚಿದಂತೆ ಆಗಿದೆ.

ದಲಿತ ಕವಿ ಎಂದು ಪ್ರಸಿದ್ಧಿ ಪಡೆದಿದ್ದ ಸಿದ್ಧಲಿಂಗಯ್ಯ,  ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ  ಸಾಹಿತ್ಯ ರಚಿಸಿದ್ದರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಸಿದ್ಧಲಿಂಗಯ್ಯ ಅವರ ಸಾಹಿತ್ಯ ಕೃಷಿಗೆ  ಹಲವು ಪ್ರಶಸ್ತಿಗಳು ಬಂದಿವೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top