Advertisement

1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಮತ್ತೆ 9 ದಿನ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಮತ್ತೆ ಅರ್ಜಿ ಸಲ್ಲಿಸಲು ಕೆಇಎ ಅವಕಾಶ ನೀಡಿದೆ. PSI ಸೇರಿದಂತೆ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ‌ ಪ್ರಾಧಿಕಾರ ( KEA ) ಪ್ರಕಟಿಸಿದೆ. PSI ಪರೀಕ್ಷೆ OCT 3ಕ್ಕೆ ನಡೆಯಲಿದೆ. ವಯೋಮಿತಿ ಸಡಿಲ ಮಾಡಿರುವ ಕಾರಣಗ್ರಾಮ ಆಡಳಿತಾಧಿಕಾರಿ (VAO) ಮತ್ತು GTTC ಹುದ್ದೆಗಳಿಗೆ ಸೆ.19ರಿಂದ 9 ದಿನ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಪ್ರಕಟಣೆ ಹೊರಡಿಸಿದೆ.

ರಾಜ್ಯ ಸರ್ಕಾರದ ಮಹತ್ತರ ಆದೇಶದ ಹಿನ್ನೆಲೆಯಲ್ಲಿ ಕೆಇಎ ಫೆಬ್ರುವರಿ-ಮಾರ್ಚ್ ನಲ್ಲಿ ಹೊರಡಿಸಿದ್ದ ಕಂದಾಯ ಇಲಾಖೆಯ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಇದೀಗ ಮತ್ತೆ ಅರ್ಜಿ ಸ್ವೀಕಾರ ಮಾಡಲಿದೆ. ಈ ಕುರಿತು ಮುಂದಿನ ಕೆಇಎ ಪರೀಕ್ಷೆಗಳ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯಲ್ಲಿ ಮಾಹಿತಿ ಸಿಕ್ಕಿದೆ. ಸೆ.19ರಿಂದ 9 ದಿನ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.

 

Dvgsuddi: Dvgsuddi.com is a live Kannada news portal. Kannada news online. political, information, crime, film, Sports News in Kannada
Recent Posts