ಬೆಂಗಳೂರು: ಪಶು ಆಹಾರ ಘಟಕಗಳಿಗೆ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ಕೆಎಂಎಫ್ ನಿರ್ಧರಿಸಿದ್ದು, ಪ್ರತಿ ಕ್ವಿಂಟಾಲ್ ಗೆ 2,250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲಾಗುವುದು ಎಂದು ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ(ಕೆಎಂಎಫ್) ತಿಳಿಸಿದೆ.
ರಾಜ್ಯದಲ್ಲಿ ಮೆಕ್ಕೆಜೋಳ ಬೆಳೆಯನ್ನು ಅತಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿಯೂ ಸಹ 2 ಸಾವಿರದಿಂದ 2,350 ರೂ. ಗಳ ವರೆಗೆ ಮಾರಾಟ ಮಾಡಲಾಗುತ್ತಿದೆ. ಪ್ರತಿ ವರ್ಷದಂತೆ ಕೆಎಂಎಫ್ ಈ ವರ್ಷವೂ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ಕೆಎಂಎಫ್ ನಿರ್ಧರಿಸಿದ್ದು, ಪ್ರತಿ ಕ್ವಿಂಟಾಲ್ ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲಿದೆ. ಆಸಕ್ತ ರೈತರು ಸಮೀಪದ ಕೆಎಂಎಫ್ ಕೇಂದ್ರಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.
ಹೈನುಗಾರಿಕೆ ಪ್ರೋತ್ಸಾಹಿಸಲು ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಸಹಾಯಧನ ನೀಡುತ್ತಿದ್ದು, ಕಳೆದ 4 ತಿಂಗಳಿಂದ ಬಾಕಿ ಬಿಡುಗಡೆಯಾಗಿಲ್ಲ. ಜುಲೈನಿಂದ ಅಕ್ಟೋಬರ್ ವರೆಗಿನ ಬಾಕಿಯನ್ನು ಬಿಡುಗಡೆ ಮಾಡಲು ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ತಿಳಿಸಿದೆ. ಪ್ರತಿ ತಿಂಗಳು ತಮ್ಮ ಖಾತೆಗೆ ಸಹಾಯಧನ ಬಿಡುಗಡೆ ಮಾಡುವಂತೆ ಹಾಲು ಉತ್ಪಾದಕರು ಒತ್ತಾಯಿಸಿದ್ದು, ಇದನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ನಾಲ್ಕು ತಿಂಗಳ ಬಾಕಿ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ತಿಳಿಸಿದೆ.