ಧಾರವಾಡ: ರಾಜ್ಯದಲ್ಲಿ ಒಂದು ತಿಂಗಳ ಮುಂಗಾರು ಮಳೆ ಅಬ್ಬರಿಸಿ, ಪ್ರವಾಹ ಸ್ಥಿತಿ ಸೃಷ್ಠಿಸಿತ್ತು. ತಿಂಗಳ ಬಿಡುವಿನ ನಂತರ ಇದೀಗ ಹಿಂಗಾರು ಮಳೆ ಅಬ್ಬರಿಸಲಿದ್ದು, ತೊಂದರೆ ತಪ್ಪಿದ್ದಲ್ಲ ಎಂದು ಕೋಡಿಮಠ ಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಭೂಮಿಯಿಂದ ವಿಷ ಜತುಗಳು ಹೊರಗೆ ಬರುತ್ತವೆ. ಅವುಗಳಿಂದ ಮನುಷ್ಯ ಕುಲ ನಾಶವಾಗುತ್ತದೆ. ಈ ವಿಷ ಜಂತುಗಳು ಮನುಷ್ಯರನ್ನ ನಾಶ ಮಾಡುತ್ತವೆ. ಇದಕ್ಕೆ ಪೂರಕ ಎಂಬಂತೆ ಈಗಾಗಲೇ ಕಾಡಿನಿಂದ ಪ್ರಾಣಿಗಳು ಊರಿಗೆ ನುಗ್ಗುವುದು ನಡೆದಿದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗುತ್ತದೆ.
ಜಾಗತಿಕ ಮಟ್ಟದಲ್ಲಿ ಯುದ್ಧ ಭೀತಿ ಇದೆ. ಜನರ ಶಾಂತಿ, ಸಹನೆ, ಆರೋಗ್ಯ ಕೆಡುತ್ತದೆ. ಜಾಗತಿಕ ಮಟ್ಟದಲ್ಲಿ ದೊಡ್ಡ ದೊಡ್ಡ ನಗರಗಳಿಗೆ ಆಪತ್ತು ಇದೆ.ವಿಷ ವಾಯು ಬೀಸಿದ್ದರಿಂದ ಜನರ ಆರೋಗ್ಯದ ಮೇಲೆ ತೊಂದರೆಯಾಗುತ್ತಿದೆ. ಆಕಸ್ಮಿಕ ಮೃತ್ಯುಗಳು ಹೆಚ್ಚಾಗುತ್ತವೆ ಎಂದು ತಿಳಿಸಿದ್ದಾರೆ.



