ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 3000 ಹುದ್ದೆ ಭರ್ತಿಗೆ ಮುಂದಾಗಿದೆ. 2024ರ ಆರಂಭದಲ್ಲಿ 3 ಸಾವಿರಕ್ಕೂ ಅಧಿಕ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಈ ಕುರಿತು ಅಂದಾಜು ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ ಎಂದು ಕೆಪಿಎಸ್ ಸಿ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ತಿಳಿಸಿದ್ದಾರೆ.
ಖಾಲಿ ಹುದ್ದೆಗೆ ಕೆಪಿಎಸ್‌ಸಿಯಿಂದ ಪರೀಕ್ಷೆ ನಡೆಯಲಿದ್ದು, ವಿವಿಧ ಹಂತದ 3 ಸಾವಿರ ಹುದ್ದೆಗಳ ಭರ್ತಿ ನಡೆಯಲಿದೆ. ನೇಮಕಕ್ಕೆ ಈಗಾಗಲೇ 30 ಇಲಾಖೆಗಳಿಂದ ಕೆಪಿಎಸ್ ಸಿ ಗೆ ಪ್ರಸ್ತಾವನೆ ಸಲ್ಲಿಸಿವೆ.ಈ ಹುದ್ದೆಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.
ಪ್ರಸಕ್ತ ವರ್ಷಾಂತ್ಯಕ್ಕೆ ಮುಂದಿನ ವರ್ಷದಲ್ಲಿ ನಡೆಸಬೇಕಾಗಿರುವ ನೇಮಕಾತಿ ವೇಳಾಪಟ್ಟಿ ಸಿದ್ಧ ಪಡಿಸಲಾಗುತ್ತಿದೆ. ಕೆ.ಪಿ.ಎಸ್.ಸಿ. ಕೂಡ ಅರ್ಜಿ ಆಹ್ವಾನ, ಪರೀಕ್ಷೆ, ಫಲಿತಾಂಶ, ಆಯ್ಕೆ ಪಟ್ಟಿ ಚಟುವಟಿಕೆಗಳನ್ನು ನಿಗದಿಯಂತೆ ಕಾಲಮಿತಿಯಲ್ಲಿ ಮುಗಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೆ.ಪಿ.ಎಸ್.ಸಿ. ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ಮಾಹಿತಿ ನೀಡಿದ್ದಾರೆ.



