ಹುಬ್ಬಳ್ಳಿ : ರಾಜ್ಯದ ಗ್ರಾಮಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಿಡಿಒಗಳಿಗೆ ಸಚಿವ ಕೆ.ಎಸ್. ಈಶ್ವರಪ್ಪ ಸಿಹಿಸುದ್ದಿ ನೀಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗಳನ್ನು ಮುಂಬಡ್ತಿ ನೀಡಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 170 ಕ್ಕೂ ಹೆಚ್ಚು ಸಹಾಯಕ ನಿರ್ದೇಶಕರ ಹುದ್ದೆ ಖಾಲಿ ಇವೆ. ಆ ಹುದ್ದೆಗಳಿಗೆ ಪಿಡಿಒಗಳಿಗೆ ಬಡ್ತಿ ನೀಡುವ ಮೂಲಕ ಭರ್ತಿ ಮಾಡಿಕೊಳ್ಳುತ್ತೇವೆ. ತಾಲೂಕಿಗೆ 1 ಸಹಾಯಕ ನಿರ್ದೇಶಕರ ಹುದ್ದೆಗಳನ್ನು 2 ಕ್ಕೆ ಹೆಚ್ಚಿಸಲು ಬೇಡಿಕೆ ಇದೆ. ಪಿಡಿಒ ಹುದ್ದೆ ಬಿಗ್ರೂಪ್ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳತ್ತೇವೆ ಎಂದು ತಿಳಿಸಿದರು.