Connect with us

Dvgsuddi Kannada | online news portal | Kannada news online

ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಕೆಎಸ್ ಆರ್ ಟಿಸಿ ಬಸ್; ತಪ್ಪಿದ ಭಾರೀ ಅನಾಹುತ..!

ಪ್ರಮುಖ ಸುದ್ದಿ

ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಕೆಎಸ್ ಆರ್ ಟಿಸಿ ಬಸ್; ತಪ್ಪಿದ ಭಾರೀ ಅನಾಹುತ..!

ಹಾವೇರಿ:  ಏಕಾಏಕಿ ಬ್ರೇಕ್ ಫೇಲ್ ಆದ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾದ ಪರಿಣಾಮ 35 ಪ್ರಯಾಣಿಕರಿಗೆ ಗಾಯಗಳಾದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿ ನಡೆದಿದೆ.

ಛತ್ರ ಗ್ರಾಮದ ಬಳಿ ಇರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ದುರ್ಘಟನೆ ನಡೆದಿದೆ. ಗಾಯಗೊಂಡಿರುವ 35 ಪ್ರಯಾಣಿಕರನ್ನು ಬ್ಯಾಡಗಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಂಬುಲೆನ್ಸ್ ಇಲ್ಲದೆ ಗಾಯಾಳುಗಳು ಕೆಲಕಾಲ ಪರದಾಡುವ ಪರಸ್ಥಿತಿ ನಿರ್ಮಾಣವಾಗಿತ್ತು.

ಬ್ಯಾಡಗಿ ಡಿಪೋಗೆ ಸೇರಿದ ಬಸ್ ಇದಾಗಿದ್ದು,  ಗದಗನಿಂದ ರಾಣೇಬೆನ್ನೂರಿಗೆ ತೆರಳುತ್ತಿದ್ದ ವೇಳೆ ಬಸ್ ಬ್ರೇಕ್ ಫೇಲ್ ಆಗಿ ಈ ದುರ್ಘಟನೆ ಸಂಭವಿಸಿದೆ. ಬಸ್‌ನಲ್ಲಿ ದೊಡ್ಡದಾಗಿ ಶಬ್ದ ಬಂದ ಕೂಡಲೇ ಚಾಲಕ ಬಸ್ ನಿಲ್ಲಿಸಲು ಪ್ರಯತ್ನಿಸಿದ್ದಾನೆ. ಈ ವೇಳೆ ಬ್ರೇಕ್ ಫೇಲ್ ಆಗಿದ್ದು, ತುಳಿದು ನಿಲ್ಲಿಸಲು ಪ್ರಯತ್ನಿಸಿದಾಗ ಬಸ್ ರಸ್ತೆಯ ಪಕ್ಕಕ್ಕೆ ಪಲ್ಟಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top