ಬೆಂಗಳೂರು: ಮಹಿಳಾ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮತ್ತೊಂದು ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ಮೊಬೈಲ್ ನಲ್ಲಿಯೇ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ದಿನಾಂಕ 7.06.2023 ಅವಕಾಶವನ್ನು ಕಲ್ಪಿಸಿದ್ದು, ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸಬಹುದಾಗಿತ್ತು. ಇದೀಗ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲನಕಲು/ಡಿಜಿಲಾಕರ್ ಹಾರ್ಡ್ ಮತ್ತು ಸಾಫ್ಟ್ ಕಾಪಿ) ಮಾದರಿಯಲ್ಲಿ ತೋರಿಸಿದಲ್ಲಿ ಹಾಜರುಪಡಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮಹಿಳಾ ಪ್ರಯಾಣಿಕರು ಮೊಬೈಲ್‌ನಲ್ಲಿ ಅಧಿಕೃತ ಗುರುತಿನ ಚೀಟಿ ತೋರಿಸಿದರೂ ಮೊಬೈಲ್‌ನಲ್ಲಿನ ಗುರುತಿನ ಚೀಟಿ ನಡೆಯುವುದಿಲ್ಲ ಎಂದು ಕೆಲವು ನಿರ್ವಾಹಕರುಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಕ.ರಾ.ರ.ಸಾ.ನಿಗಮ ತಿಳಿಸಿದೆ.
ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ, ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಲಾಗಿದೆ. ಈ ಬಗ್ಗೆ ದೂರುಗಳು ಸ್ವೀಕೃತಗೊಂಡಲ್ಲಿ ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳುವುದು ಎಂದು ತಿಳಿಸಿದೆ.