ರಾಜ್ಯ ಸಾರಿಗೆ ಇಲಾಖೆಯಲ್ಲಿ 13,888 ನೌಕರರು ನಿವೃತ್ತಿ ಹೊಂದಲಿದ್ದಾರೆ. ಶೀಘ್ರವೇ 8,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ವಿಜಯಪುರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2013ರಲ್ಲಿ ಸಾರಿಗೆ ಸಿಬ್ಬಂದಿ ನೇಮಕ ಮಾಡಿದ್ದು ಬಿಟ್ಟರೇ ಮತ್ತೆ ನೇಮಕ ಮಾಡಿಲ್ಲ. ನಾಲ್ಕು ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಅವಧಿಯಲ್ಲೂ ಮಾಡಿಲ್ಲ. ಬರುವ 4-5 ತಿಂಗಳಲ್ಲಿ ರಾಜ್ಯದಲ್ಲಿ ಹೊಸ ಬಸ್ ಓಡಾಡಲಿದ್ದಾವೆ. ಎಂಟು ಸಾವಿರ ಸಿಬ್ಬಂದಿಗಳ ನೇಮಕಾತಿ ಆಗಲಿದೆ. ರದ್ದಾಗಿರುವ ಸಾರಿಗೆ ಸಂಚಾರ ಶೆಡ್ಯೂಲ್ ಪುನರಾರಂಭಕೂಡ ಆಗಲಿದೆ ಎಂದು ತಿಳಿಸಿದರು.
ಶಕ್ತಿ ಯೋಜನೆ ಜಾರಿಗೊಂಡ ನಂತರ ಮಹಿಳೆಯರಿಗೆ ಅನುಕೂಲವಾಗಿದೆ.ಬಿಜೆಪಿ ನಾಯಕರು ಸುಖಾಸುಮ್ಮನೇ ಟೀಕೆ ಮಾಡ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಒಂದೂ ಹೊಸ ಬಸ್ ಖರೀದಿ ಮಾಡಿಲ್ಲ. ಬಿಜೆಪಿ ಸರ್ಕಾರದ ಕೊನೆಯಲ್ಲಿ ಹೊಸ ಬಸ್ ಖರೀದಿ ತೀರ್ಮಾನ ಮಾಡಿ, ಅನುಷ್ಠಾನಕ್ಕೂ ತರಲಿಲ್ಲ ಎಂದರು.



