ಗೌರಿ, ಗಣೇಶ‌ ಹಬ್ಬಕ್ಕೆ ಕೆಎಸ್ ಆರ್ ಟಿಸಿಯಿಂದ 500 ಹೆಚ್ಚುವರಿ ಬಸ್: ಮುಂಗಡ ಬುಕ್ಕಿಂಗ್ ಗೆ ಶೇ.10 ರಷ್ಟು ರಿಯಾಯಿತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್ ಆರ್ ಟಿಸಿ ವತಿಯಿಂದ 500 ಹೆಚ್ಚುವರಿ ಬಸ್ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಆ.29ರಿಂದ 31 ವರೆಗೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ 500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 31.08.2022ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ. ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಬೆಂಗಳೂರು ನಗರದ ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು. ಕೋವಿಡ್-19 ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಸಾರ್ವಜನಿಕ ಪ್ರಯಾಣಿಕರು ಪಾಲನೆ ಮಾಡುವುದು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *