Connect with us

Dvgsuddi Kannada | online news portal | Kannada news online

ದೀಪಾವಳಿ ಹಬ್ಬಕ್ಕೆ ಕೆಎಸ್ ಆರ್ ಟಿಸಿ 2 ಸಾವಿರ ಹೆಚ್ಚುವರಿ ಬಸ್ ; ಮುಂಗಡ ಬುಕ್ಕಿಂಗ್ ಗೆ ರಿಯಾಯಿತಿ

ಪ್ರಮುಖ ಸುದ್ದಿ

ದೀಪಾವಳಿ ಹಬ್ಬಕ್ಕೆ ಕೆಎಸ್ ಆರ್ ಟಿಸಿ 2 ಸಾವಿರ ಹೆಚ್ಚುವರಿ ಬಸ್ ; ಮುಂಗಡ ಬುಕ್ಕಿಂಗ್ ಗೆ ರಿಯಾಯಿತಿ

ಬೆಂಗಳೂರು: ದೀಪಾವಳಿ, ಕನ್ನಡ ರಾಜ್ಯೋತ್ಸವದ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಅ.30 ರಿಂದ ನ.1 ರವರೆಗೆ ಕೆಎಸ್‌‍ಆರ್‌ಟಿಸಿಯಿಂದ 2 ಸಾವಿರ ಹೆಚ್ಚುವರಿ ಬಸ್‌‍ ವ್ಯವಸ್ಥೆ ಕಲ್ಪಿಸಲಾಗಿದೆ.ಮುಂಗಡ ಬುಕ್ಕಿಂಗ್ ಗೆ ರಿಯಾಯಿತಿ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಕೆಂಪೇಗೌಡ ಬಸ್‌‍ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ, ವಿಜಯವಾಡ, ಹೈದರಾಬಾದ್‌ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಹಾಗೂ ಮೈಸೂರು ರಸ್ತೆ ಬಸ್‌‍ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಯಲಿದೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್‌, ತ್ರಿಶೂರ್‌, ಏರ್ನಾಕುಲಂ, ಕ್ಯಾಲಿಕಟ್‌ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‌‍ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್‌‍ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್ ಗಳ ಮೇಲೆ ನಮೂದಿಸಲಾಗಿರುವ ಬಸ್‌‍ ನಿಲ್ದಾಣ/ಪಿಕ್‌ಅಪ್‌ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ. ಪ್ರಯಾಣಿಕರು ಇ-ಟಿಕೆಟ್‌ ಬುಕಿಂಗ್‌ ಅನ್ನು www.ksrtc.karnataka.gov.in ವೆಬ್‌ ಸೈಟ್‌ ಮುಖಾಂತರ ಮಾಡಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಬರುವ ಪ್ರಯಾಣದ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದಾಗ ವಾಪಸ್‌‍ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳಿದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

 

Dvgsuddi.com is a live Kannada news portal. Kannada news online. political, Informative , job, local (davangere), crime, film, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top