ಬೆಂಗಳೂರು: ಸಾರಿಗೆ ನೌಕರ ಮುಷ್ಕರ ನಾಲ್ಕನೆ ದಿನಕ್ಕೆ ಕಾಲಿಟ್ಟಿದ್ದು, ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ರಾಜ್ಯದ ನಾಲ್ಕು ನಿಗಮದಿಂದ 1,220 ಬಸ್ ಗಳು ಕಾರ್ಯಾಚರಣೆ ಆರಂಭಿಸಿವೆ.
ಈ ಬಗ್ಗೆ ಕೆಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಆರನೇ ವೇತನ ಆಯೋಗದ ಅನ್ವಯ ವೇತನ ಹೆಚ್ಚಳಕ್ಕೆ ಆಗ್ರಹಿಸಿ ನಡೆಯುತ್ತಿರುವ ಸಾರಿಗೆ ನೌಕರರ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಇದರ ಮಧ್ಯೆ ಇಂದು ಬೆಳಗ್ಗೆಯಿಂದಲೇ ಕೆಎಸ್ ಆರ್ ಟಿಸಿ, ಬಿಎಂಟಿಸಿ, ವಾಯುವ್ಯ, ನೈಋತ್ಯ ಸಾರಿಗೆ ನಿಗಮಗಳಲ್ಲಿ ಬಸ್ ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಮಧ್ಯಾಹ್ನ12 ಗಂಟೆಗೆ 928, 1 ಗಂಟೆಗೆ 1034, 2 ಗಂಟೆ ವೇಳೆಗೆ 1112 ಬಸ್ ಗಳು ಹಾಗೂ 3 ಗಂಟೆ ವೇಳೆಗೆ 1,220 ಬಸ್ ಗಳು ಕಾರ್ಯಾಚರಣೆ ಆರಂಭಿಸಿವೆ.



