ಬೆಂಗಳೂರು: ರಾಜ್ಯದ ಸಾರಿಗೆ ನೌಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೇ.15ರಷ್ಟು ವೇತನ ಹೆಚ್ಚಿಸಲಾಗಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಘೋಷಣೆ ಮಾಡಿದ್ದಾರೆ.
ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಇಂದು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15% ವೇತನ ಹೆಚ್ಚಳ ಮಾಡೋಕೆ ನಿರ್ಧಾರ ಮಾಡಿದ್ದೇವೆ.
ಕಳೆದ 27 ವರ್ಷಗಳಲ್ಲಿ ಅತ್ಯಧಿಕ ವೇತನ ಪರಿಷ್ಕರಣೆ ನಮ್ಮ ಸರ್ಕಾರ ಮಾಡಿದೆ.
— B Sriramulu (@sriramulubjp) March 16, 2023
ಈ ಬಗ್ಗೆ ಟ್ವಿಟ್ ಮಾಡಿದ ಸಚಿವರು,ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಇಂದು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15% ವೇತನ ಹೆಚ್ಚಳ ಮಾಡೋಕೆ ನಿರ್ಧಾರ ಮಾಡಿದ್ದೇವೆ. ಕಳೆದ 27 ವರ್ಷಗಳಲ್ಲಿ ಅತ್ಯಧಿಕ ವೇತನ ಪರಿಷ್ಕರಣೆ ನಮ್ಮ ಸರ್ಕಾರ ಮಾಡಿದೆ. ಈ ನಿರ್ಧಾರದಿಂದ ವಾರ್ಷಿಕ 4 ರಸ್ತೆ ಸಾರಿಗೆ ನಿಗಮಗಳಿಗೆ ಅಂದಾಜು ರೂ.550 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.
ಜನರಿಗೆ ಯಾವುದೇ ವ್ಯತ್ಯಯ ಆಗೋಕೆ ಬಿಡೋದು ಬೇಡ. ಮುಂದೆ ಇನ್ನಷ್ಟು ಒಳ್ಳೆಯ ಕಾಲ ಬರಲಿದೆ ಅಂತ ಹೇಳುತ್ತೇನೆ.
ಸಾರಿಗೆ ನೌಕರರಿಗೆ ವೇತನ ಕಾಲ ಕಾಲಕ್ಕೆ ಪರಿಷ್ಕರಣೆಯಾಗುತ್ತಿದ್ದು, ಈ ಹಿಂದಿನ ವೇತನ ಪರಿಷ್ಕರಣೆಗಳ ವಿವರ:
1996 – 11%
2000 – 10%
2004 – 5%
2008 – 6%
2012 – 10%
2016 – 12.50%
ಪ್ರಸ್ತುತ ಘೋಷಣೆ 15%— B Sriramulu (@sriramulubjp) March 16, 2023
ಸಾರಿಗೆ ಇಲಾಖೆಯ ಸಿಬ್ಬಂದಿಗಳು ವೇತನ ಹೆಚ್ಚಳ ಮಾಡುವಂತೆ ಬಹು ದಿನದಿಂದ ಒತ್ತಾಯ ಮಾಡುತ್ತಿದ್ದರು. ನೌಕರರ ಒತ್ತಾಯಕ್ಕೆ ಪ್ರತಿಸ್ಪಂದಿಸಿರುವ ರಾಜ್ಯ ಸರ್ಕಾರ ಇದೀಗ ಸಿಬ್ಬಂದಿಗಳ ವೇತನವನ್ನು ಶೇ.15ರಷ್ಟು ಹೆಚ್ಚಳ ತೀರ್ಮಾನ ಕೈಗೊಂಡಿದೆ. ಇದರೊಂದಿಗೆ ಸಾರಿಗೆ ನೌಕರರ ಹೋರಾಟಕ್ಕೆ ಫಲ ನೀಡಿದಂತಾಗಿದೆ.



