ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿದ್ದು, ಮತ್ತೆ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೊನಾ ಸೋಂಕು ಹೆಚ್ಚಾದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಬೇಕಾಗುತ್ತದೆ. ಸೋಂಕು ಹೆಚ್ಚಾದರೆ ಲಾಕ್ ಡೌನ್ ನಮಗೆ ಬೇರೆ ಮಾರ್ಗ ಇಲ್ಲ. ನಮಗೆ ಲಾಕ್ ಡೌನ್ ಮಾಡಿದರೆ ಖುಷಿ ಇಲ್ಲ. ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗಿದ್ದು, ಹಲವು ನಗರಗಳಲ್ಲಿ ಮತ್ತೆ ಲಾಕ್ ಡೌನ್ ಘೋಷಿಸಲಾಗಿದೆ.
ಇನ್ನು ರಾಜ್ಯದಲ್ಲಿ ಮತ್ತೆ ಕಂಟೇನ್ಮೆಂಟ್ ಜೋನ್ ಜಾರಿ ಮಾಡುವ ಕುರಿತಂತೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.



