Connect with us

Dvg Suddi-Kannada News

ರಾಜ್ಯದ ಈ 8 ಜಿಲ್ಲೆಗಳಿಗೆ ಇಲ್ಲ ಅನ್ ಲಾಕ್ ಭಾಗ್ಯ

ಪ್ರಮುಖ ಸುದ್ದಿ

ರಾಜ್ಯದ ಈ 8 ಜಿಲ್ಲೆಗಳಿಗೆ ಇಲ್ಲ ಅನ್ ಲಾಕ್ ಭಾಗ್ಯ

ಬೆಂಗಳೂರು: 8 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೊನಾ ಇಳಿಕೆಯಾಗುತ್ತಿಲ್ಲ. ಆದ್ದರಿಂದ ಈ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್‌ಡೌನ್ ಮುಂದುವರೆಸಲು ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಇಂದು ಜಿಲ್ಲಾಡಳಿತಗಳ ಡಿಸಿಗಳ ಜೊತೆ ನಡೆಸಿದ ಸಭೆಯಲ್ಲಿ ಸಿಎಂ ಯೆಇಯೂರಪ್ಪ ಕಳವಳ ವ್ಯಕ್ತಪಡಿಸಿದ್ದಾರೆ. ಜೂನ್ 14ರ ನಂತರ ಕೆಲವು ಜಿಲ್ಲೆಯಲ್ಲಿ ಅನ್ ಲಾಕ್ ಆದರೂ 8 ಜಿಲ್ಲೆಗಳಲ್ಲಿ ಲಾಕ್ಡೌನ್ ಇರಲಿದೆ. ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ಮಂಡ್ಯ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು ಡಿಸಿಗಳ ಜೊತೆ ಯಡಿಯೂರಪ್ಪ ಸಭೆ ನಡೆಸಿದರು.

ರಾಜ್ಯದ 8 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೊನಾ ಇಳಿಕೆಯಾಗುತ್ತಿಲ್ಲ. ಹೀಗಾಗಿ ಆ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್‌ಡೌನ್ ಮುಂದುವರೆಸಲು ಸೂಚಿಸಿದ್ದಾರೆ. ಜಿಲ್ಲೆಗಳಲ್ಲಿ ಜನರು ಕೊವಿಡ್ ನಿಯಮ ಉಲ್ಲಂಘಿಸದಂತೆ ಕ್ರಮಕೈಗೊಳ್ಳಬೇಕು. 8 ಜಿಲ್ಲೆಯಲ್ಲಿ ಸೋಂಕು ಕಡಿಮೆಯಾಗದ ಕಾರಣ ಒಂದು ವಾರ ಲಾಕ್​ಡೌನ್ ಮುಂದುವರಿಸೋಣ. ಈ ಬಗ್ಗೆ ನೀವೇ ಚರ್ಚೆ ಮಾಡಿ ತಿಳಿಸಿ ಎಂದು ಸಿಎಂ ಬಿಎಸ್ವೈ ಆದೇಶಿಸಿದ್ದಾರೆ.

ಡಿಸಿ, ಉಸ್ತುವಾರಿ ಸಚಿವರಿಗೆ ಜವಾಬ್ದಾರಿ: ಎಲ್ಲವನ್ನೂ ನಾವು ಇಲ್ಲಿಂದ ಕುಳಿತು ಹೇಳಲು ಆಗಲ್ಲ. ಜಿಲ್ಲೆಗಳಲ್ಲಿಯೇ ನೀವು ಚರ್ಚೆ ಮಾಡಿ ಮಾಹಿತಿ ತಿಳಿಸಿ. ಪಾಸಿಟಿವಿಟಿ ಕಡಿಮೆ ಮಾಡಲು ಕ್ರಮವಹಿಸಿ ಎಂದು ಡಿಸಿ, ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಿದ್ದಾರೆ. ರಾಜ್ಯದಲ್ಲಿ ಸೋಂಕಿತರ ತೀವ್ರತೆ ಕಡಿಮೆಯಾಗುತ್ತಿದೆ. ಆದರೆ ಈ ಎಂಟು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಇಳಿಕೆ ಆಗುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚುತ್ತಿರುವುದು ಆತಂಕ ಹೆಚ್ಚಿಸಿದೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top