Connect with us

Dvg Suddi-Kannada News

ದಾವಣಗೆರೆ ಸೇರಿದಂತೆ 11ಜಿಲ್ಲೆಯಲ್ಲಿ ಜೂ. 14 ನಂತರ ಲಾಕ್ ಡೌನ್ ಮುಂದುವರಿಕೆ; ಉಳಿದ ಜಿಲ್ಲೆಯಲ್ಲಿ ಅನ್ ಲಾಕ್ ; ಸಿಎಂ ಘೋಷಣೆ

ಪ್ರಮುಖ ಸುದ್ದಿ

ದಾವಣಗೆರೆ ಸೇರಿದಂತೆ 11ಜಿಲ್ಲೆಯಲ್ಲಿ ಜೂ. 14 ನಂತರ ಲಾಕ್ ಡೌನ್ ಮುಂದುವರಿಕೆ; ಉಳಿದ ಜಿಲ್ಲೆಯಲ್ಲಿ ಅನ್ ಲಾಕ್ ; ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಸೇರಿ 11 ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರೆಯಲಿದೆ. ಈ 11 ಜಿಲ್ಲೆಗಳಲ್ಲಿ ಈಗ ಜಾರಿಯಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಂಚಾರಕ್ಕೆ ಅವಕಾಶವಿಲ್ಲ. ನಿರ್ಮಾಣ ಚಟುವಟಿಕೆ ಆರಂಭಿಸಲು ಅನುಮತಿ. ಸಿಮೆಂಟ್, ಸ್ಟೀಲ್ ಅಂಗಡಿ ತೆಗೆಯಲು ಅವಕಾಶವಿದೆ. ಎಲ್ಲ ಕಾರ್ಖಾನೆ ಶೇ 50ರಷ್ಟು ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಣೇಗೆ ಅವಕಾಶ ನೀಡಲಾಗಿದೆ.

ಗಾರ್ಮೆಂಟ್ಸ್​ ಶೇ 30 ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್​, ವೈನ್​ ಸ್ಟೋರ್, ಎಂಎಸ್​ಐಎಲ್​ಗಳಲ್ಲಿ ಮಧ್ಯಾಹ್ನ 2ರವರೆಗೆ ಪಾರ್ಸೆಲ್​ ಅವಕಾಶವಿದೆ.

ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಗ್ಗೆ ಆರರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಅಲ್ಲದೇ ನೈಟ್​ ಕರ್ಫ್ಯೂ ಸಹ ಜಾರಿಯಲ್ಲಿರಲಿದೆ ಎಂದು ತಿಳಿಸಿದರು.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top