ಮೈಸೂರು: ಮಂಗಳೂರು, ಮೈಸೂರು, ಶಿವಮೊಗ್ಗ, ದಾವಣಗೆರೆ ಮತ್ತು ತುಮಕೂರು ಮಹಾನಗರ ಪಾಲಿಕೆಗಳಿಗೆ ಶೀಘ್ರದಲ್ಲಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ.
ಇನ್ನೂ ಮೂರು ದಿನ ರಾಜ್ಯದ ವಿವಿಧ ಕಡೆ ಮಳೆ ಮುನ್ಸೂಚನೆ
ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಮತದಾರರ ಪಟ್ಟಿ ಸಿದ್ಧವಾಗಿದೆ. ರಾಜ್ಯ ಸರಕಾರ ಮೀಸಲಾತಿ ಪಟ್ಟಿ ಕೊಟ್ಟರೆ ಸರಿ. ಕೊಡದೆ ಇದ್ದರೆ ಹೈಕೋರ್ಟ್ ಮೊರೆ ಹೋಗಿ ಹಳೆಯ ಮೀಸಲು ಪಟ್ಟಿಯಂತೆ ಚುನಾವಣೆ ಮಾಡುತ್ತೇವೆ. ಆದಷ್ಟು ಬೇಗ 5 ಮಹಾನಗರ ಪಾಲಿಕೆಗಳ ಮೀಸಲು ಪಟ್ಟಿ ನೀಡುವಂತೆ ಸರಕಾರಕ್ಕೆ ಪತ್ರ ಬರೆದಿದ್ದೇವೆ ಎಂದರು.
ದಾವಣಗೆರೆ: 40 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಾಲ್ಲೂಕು ಪಂಚಾಯಿತಿ ಸಿಇಓ ಕಾರು ಚಾಲಕ
ರಾಜ್ಯ ಸರ್ಕಾರ ಅನಗತ್ಯವಾಗಿ ವಿಳಂಬ ಮಾಡುತ್ತಿದೆ ಎಂದು ಹೇಳಲು ಆಗದು, ಸರ್ಕಾರಕ್ಕೆ ತನ್ನದೇ ಆದ ಜವಾಬ್ದಾರಿ ಇದೆ. ಯಾವುದೇ ವರ್ಗಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದರು.