ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಹಲವರು ಗಾಯಗೊಂಡ ಘಟನೆ ಬಂಟ್ವಾಳ ಕಾಲೇಜಿನ ಬಳಿ ನಡೆದಿದೆ.
ಈ ಬಸ್ ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರು ಪ್ರಯಣಿಸುತ್ತಿದ್ದು, ವಿದ್ಯಾರ್ಥಿಗಳಿದ್ದರು. ಘಟನೆಲ್ಲಿ ಪ್ರಯಾಣಿಕರಿಗೆ ಗಾಯವಾಗಿದ್ದು, ಎಲ್ಲರನ್ನೂ ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆರೋಗ್ಯ ಸಚಿವರಾದ ಡಾ. ಸುಧಾಕರ್ ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಗೊಂಡ ಪ್ರಯಾಣಿಕರ ಆರೋಗ್ಯ ವಿಚಾರಿಸಿದರು. ಘಟನೆಯ ಕುರಿತಾಗಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.



