ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 186 ಕೋಟಿ ಅವ್ಯವಹಾರ ಕೇಸ್‌ನಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ನಾಗೇಂದ್ರ ತಲೆದಂಡವಾಗಿದೆ. ಭ್ರಷ್ಟಾಚಾರ ಆರೋಪದಲ್ಲಿ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ.ತನಿಖೆ ವೇಳೆ ನಾನು ಅಧಿಕಾರದಲ್ಲಿ ಇರಬಾರದು ಎಂದು ನಾನು ರಾಜಿನಾಮೆ ಕೊಡ್ತಿದ್ದೀನಿ. ರಾಜ್ಯದ ಜನತೆ ದಿಕ್ಕು ತಪ್ಪಬಾರದು ಅಂತ ನಾನು ನನ್ನ ಸ್ವ ಇಚ್ಛೆಯಂದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ರಾಜಿನಾಮೆ ಪತ್ರ ಕೊಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
ರಾಜೀನಾಮೆ ವದಂತಿ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಸಚಿವರು,ಡೆತ್‌ನೋಟ್‌ನಲ್ಲಿ ನನ್ನ ಹೆಸರು ಉಲ್ಲೇಖಿಸಿಲ್ಲ. ಈ ಪ್ರಕರಣದಲ್ಲಿ ನಾನು ನಿರ್ದೋಷಿಯಾಗಿ ಬರ್ತಿನಿ ಅಂತ ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆತ್ಮ ಹತ್ಯೆ ಮಾಡಿಕೊಂಡಿರುವ ಅಧಿಕಾರಿ ಎಲ್ಲೂ ನನ್ನ ಹೆಸರನ್ನು ಉಲ್ಲೇಖ ಮಾಡಿಲ್ಲ.ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಡ ಅಂದರು. ಆದ್ರೆ ನಾನೇ ಸ್ವಇಚ್ಛೆಯಿಂದ ರಾಜೀನಾಮೆ ನೀಡುತಗತಿದ್ದೇನೆ. ನಿಗಮದ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಬಳಿಕ ಬಹುಕೋಟಿ ಹಗರಣ ಬೆಳಕಿಗೆ ಬಂದಿತ್ತು.
ಚಂದ್ರಶೇಖರನ್ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಸಚಿವರಿಗೆ ಗೊತ್ತಿದ್ದೇ ಹಣ ವರ್ಗಾವಣೆ ಆಗಿದೆ ಅಂತ ಬರೆಯಲಾಗಿತ್ತು. ಇದೇ ಕಾರಣಕ್ಕೆ ನಾಗೇಂದ್ರ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ಆಗ್ರಹಿಸಿದ್ದವು.
ತನಿಖೆ ಹೊಣೆ ಹೊತ್ತಿದ್ದ ಎಸ್‌ಐಟಿ ಅಧಿಕಾರಿಗಳು ನಿಗಮದ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಅಲ್ಲೂ ಕೂಡ ನಾಗೇಂದ್ರ ಹೆಸರು ಪ್ರಸ್ತಾಪ ಆಗಿತ್ತು ಎನ್ನಲಾಗಿದೆ.ನಿನ್ನೆ ನಾಗೇಂದ್ರ ಪಿಎ ನೆಕ್ಕಂಟಿ ನಾಗರಾಜ್ ನನ್ನು ಎಸ್‌ಐಟಿ ವಶಕ್ಕೆ ಪಡೆದಿತ್ತು.



