Connect with us

Dvgsuddi Kannada | online news portal | Kannada news online

2,064 ಪೌರ ಕಾರ್ಮಿಕರ ನೇರ ನೇಮಕಾತಿಗೆ ಸರ್ಕಾರ ಗ್ರೀನ್ ಸಿಗ್ನಲ್ : ಸಚಿವ ಎಂಟಿಬಿ ನಾಗರಾಜ್

mtb nagaraja

ದಾವಣಗೆರೆ

2,064 ಪೌರ ಕಾರ್ಮಿಕರ ನೇರ ನೇಮಕಾತಿಗೆ ಸರ್ಕಾರ ಗ್ರೀನ್ ಸಿಗ್ನಲ್ : ಸಚಿವ ಎಂಟಿಬಿ ನಾಗರಾಜ್

ಬೆಳಗಾವಿ : ನಗರ ಸ್ಥಳೀಯ ಸಂಸ್ಥೆಗಳಲ್ಲಿ 2,064 ಪೌರ ಕಾರ್ಮಿಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆಯಾ ಜಿಲ್ಲಾ ಜಿಲ್ಲಾಧಿಕಾರಿ ನೇತೃತ್ವದಲ್ಲಿ  ನೇಮಕಾತಿ  ನಡೆಯಲಿದೆ  ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ. ನಾಗರಾಜ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದ ಬಳಿ ಸೇವಾ ಖಾಯಮಾತಿಗೆ ಅಗ್ರಹಿಸಿ ಧರಣಿ ನಡೆಸುತ್ತಿದ್ದ ಪೌರಾಡಳಿತ ಇಲಾಖೆಯ ಪೌರ ಕಾರ್ಮಿಕರು, ಲೋಡರ್‌ಗಳು, ವಾಟರ್‌ಮ್ಯಾನ್‌ಗಳು, ಕಸದ ಆಟೋ ಚಾಲಕರು, ಕಂಪ್ಯೂಟರ್ ಅಪರೇಟರ್‌ಗಳು, ಯು.ಜಿ.ಡಿ. ಕಾರ್ಮಿಕರು ಮತ್ತು ಕಛೇರಿ ಸಹಾಯಕರ ಅಹವಾಲನ್ನು ಆಲಿಸಿದ ನಂತರ ಸಚಿವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಕೆಳಹಂತದ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು ಎಂದು ಸಚಿವ ಎಂ.ಟಿ.ಬಿ. ನಾಗರಾಜ್ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.ಲೋಡರ್, ಕ್ಲೀನರ್ ಮತ್ತು ಗ್ಯಾಂಗ್‌ಮನ್‌ಗಳಿಗೆ ವೇತನವನ್ನು ನೇರ ಪಾವತಿ ಮೂಲಕ ನೀಡುವ ಬಗ್ಗೆ ರಾಜ್ಯ ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ತಿಳಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top