ಬೆಂಗಳೂರು : ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವವರು 9 ತಿಂಗಳ ಅವಧಿಯಲ್ಲಿ ಹಣ ಡ್ರಾ ಮಾಡದಿದ್ದರೆ, ಅವರ ಖಾತೆಗಳನ್ನು ಸ್ಥಗಿತಗೊಳಿಸಲು ಬ್ಯಾಂಕ್ ಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಪ್ರತಿ ವರ್ಷ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ 4 ಲಕ್ಷ ಪಿಂಚಣಿದಾರರು ಹೊಸದಾಗಿ ಸೇರ್ಪಡೆಯಾಗುತ್ತಿದ್ದಾರೆ. ಸೂಕ್ತ ಫಲಾನುಭವಿಗಳಿಗೆ ಪಿಂಚಣಿ ಹಣ ಸಿಗಲಿ ಎಂಬುದು ನಮ್ಮ ಉದ್ದೇಶವಾಗಿದೆ. ಸತತ 9 ತಿಂಗಳು ಬ್ಯಾಂಕ್ ನಿಂದ ಪಿಂಚಣಿ ಹಣ ವಿತ್ ಡ್ರಾ ಮಾಡದಿದ್ದರೆ, ಅವರ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಲು ಬ್ಯಾಂಕ್ ಗಳಿಗೆ ಸೂಚಿಸಲಾಗುತ್ತದೆ ಎಂದರು.



